ಶಿವಮೊಗ್ಗ: ಕನ್ನಡದ ಪವರ್ ಸ್ಟಾರ್, ವರನಟ ಡಾ.ರಾಜ್ ಕುಮಾರ್ ಪುತ್ರ ಪುನೀತ್ ರಾಜ್ ಕುಮಾರ್ ಅವರ ನಿಧನ ರಾಜ್ಯದ ಜನತೆಗೆ ಆಘಾತ ನೀಡಿದೆ. ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಎರಡು ದಿನಗಳ ಬಂದ್ ಗೆ ಕರೆ ನೀಡಲಾಗಿದೆ.
ಡಾ.ರಾಜ್ ಕುಮಾರ್ ಅಭಿಮಾನಿ ಸಂಘದಿಂದ ಎರಡು ದಿನ ಭದ್ರಾವತಿ ಬಂದ್ ಗೆ ಕರೆ ನೀಡಲಾಗಿದೆ. ಪುನೀತ್ ನಿಧನದ ಹಿನ್ನೆಲೆಯಲ್ಲಿ ಇಂದು ಭದ್ರಾವತಿಯಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಮುಚ್ಚಿದರು.
ಇದನ್ನೂ ಓದಿ:ಜೊತೆಗಿರದ ಜೀವ ಎಂದಿಗೂ ಜೀವಂತ…! ‘ಕೋಟ್ಯಾಧಿಪತಿ’ಯನ್ನು ಕಳೆದುಕೊಂಡ ಕರುನಾಡು
ಭದ್ರಾವತಿ ಮುಖ್ಯರಸ್ತೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪುನಿತ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.
ಪುನೀತ್ ರಾಜ್ ಕುಮಾರ್ ಅವರು ಭದ್ರಾವತಿಯಲ್ಲಿ ಅತಿ ಹೆಚ್ಚಿನ ಅಭಿಮಾನಿ ಬಳಗವನ್ನು ಹೊಂದಿದ್ದರು. ನೆಚ್ಚಿನ ನಟನ ಸಾವು ಅಭಿಮಾನಿಗಳಿಗೆ ಬರ ಸಿಡಿಲು ಬಡಿದಂತಾಗಿದೆ.
ಇದನ್ನೂ ಓದಿ: ‘ಮತ್ತೆ ಬರುತ್ತೇನೆಂದ ಅಪ್ಪು ಬರಲೇ ಇಲ್ಲ..’ ಕಣ್ಣೀರಾದ ಕಲಬುರಗಿ ಜನತೆ!