Advertisement
ದ.ಕ. ಜಿಲ್ಲಾಡಳಿತದ ವತಿಯಿಂದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಆಯೋಜಿಸಲಾದ ಮಾನವ ಸರಪಳಿಯಲ್ಲಿ ಸಹಸ್ರ ಸಂಖ್ಯೆಯ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪ್ರಮುಖರು, ಸರಕಾರಿ ಇಲಾಖೆಗಳ ಸಿಬಂದಿ ಭಾಗವಹಿಸಿ ಪ್ರಜಾಪ್ರಭುತ್ವ ದೇಶದ ಹಿರಿಮೆ ಹಾಗೂ ಸಂವಿಧಾನದ ಆಶಯವನ್ನು ಪ್ರತಿಬಿಂಬಿಸಿದರು. ವಿವಿಧೆಡೆ ತಿರಂಗಾ ಧ್ವಜಗಳು, ಕೇಸರಿ, ಬಿಳಿ, ಹಸಿರಿನ ಬಂಟಿಂಗ್ಸ್, ಬಲೂನುಗಳು ಮಾನವ ಸರಪಳಿಗೆ ಮೆರಗು ನೀಡಿದವು. ಈ ಮೊದಲೇ ನಿಗದಿಪಡಿಸಿದ ಹೆದ್ದಾರಿಯ ವಿವಿಧ ಸ್ಥಳದಲ್ಲಿ ಬೆಳಗ್ಗೆ 9ರ ಸುಮಾರಿಗೆ ವಿದ್ಯಾರ್ಥಿಗಳು, ಸಾರ್ವಜನಿಕರು ಜಮಾಯಿಸಿದ್ದರು. 9.30ರಿಂದ 10ರ ವರೆಗೆ ನಾಡಗೀತೆ, ಸಂವಿಧಾನದ ಪೀಠಿಕೆ ಪ್ರಮಾಣ ವಚನ ಹಾಗೂ ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಲಾಯಿತು.
ದ.ಕ. ಜಿಲ್ಲಾ ಮಟ್ಟದ ಸಭಾ ಕಲಾಪ ಮಂಗಳೂರಿನ ಸಕೀìಟ್ ಹೌಸ್ ಮುಂಭಾಗದಲ್ಲಿ ನಡೆಯಿತು. ಸಂಸದ ಕ್ಯಾ| ಬ್ರಿಜೇಶ್ ಚೌಟ ಮಾತನಾಡಿ, ಪ್ರಜಾಪ್ರಭುತ್ವ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದ್ದು ಅಭಿನಂದನೀಯ. ನಮ್ಮ ಪ್ರಜಾಪ್ರಭುತ್ವ, ಸಂಸ್ಕೃತಿಯ ನೆಲೆಗಟ್ಟಿನಲ್ಲಿ ದೇಶದ ಭವಿಷ್ಯವನ್ನು ಕಟ್ಟಬೇಕಾಗಿದೆ. ಇದರೊಂದಿಗೆ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿಕೊಂಡು, ಹಕ್ಕುಗಳನ್ನು ಪಡೆಯುವ ಕಾರ್ಯ ಆಗಲಿ ಎಂದು ಆಶಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, 2007ರಿಂದ ಪ್ರಜಾಪ್ರಭುತ್ವ ದಿನವನ್ನು ವಿಶ್ವಸಂಸ್ಥೆ ಆರಂಭಿಸಿದೆ. ನಮ್ಮ ದೇಶದ ಸಂವಿಧಾನದ ಮೂಲಕ ಡಾ| ಬಿ.ಆರ್. ಅಂಬೇಡ್ಕರ್ ಅವರು ಹಲವು ಕರ್ತವ್ಯ, ಹಕ್ಕುಗಳ ಜತೆ ಸಮಾನತೆಯನ್ನು ಒದಗಿಸಿದ್ದಾರೆ. ಸಂವಿಧಾನದ ಆಶಯದಂತೆ ಎಲ್ಲರೂ ಭಾತೃತ್ವ ಭಾವದಿಂದ ಒಗ್ಗಟ್ಟಾಗಿ ಬದುಕಬೇಕು ಎಂದು ಹೇಳಿದರು.
Related Articles
Advertisement
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಪಾಲಿಕೆ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಕಾರ್ಪೊರೆಟರ್‌ಗಳಾದ ಎಂ. ಶಶಿಧರ ಹೆಗ್ಡೆ, ನವೀನ್ ಡಿ’ಸೋಜಾ, ಎ.ಸಿ. ವಿನಯರಾಜ್, ಸಂಗೀತಾ ನಾಯಕ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ., ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಜಿಪಂ ಸಿಇಒ ಡಾ|ಆನಂದ್, ಐಜಿಪಿ ಅಮಿತ್ ಸಿಂಗ್, ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಮುಂತಾದವರು ಉಪಸ್ಥಿತರಿದ್ದರು.
ಗಿಡ ನೆಟ್ಟು ಆಚರಣೆ; ಕಲಾ ತಂಡಗಳ ಸೊಬಗುಮಾನವ ಸರಪಳಿ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಸಭಾ ಕಲಾಪ ಸಕೀìಟ್ ಹೌಸ್ ಮುಂಭಾಗದಲ್ಲಿ ನಡೆಯಿತು. ಚೆಂಡೆ, ಬ್ಯಾಂಡ್, ಗೊಂಬೆ ವೇಷಗಳು, ಕೊರಗರ ಡೋಲು, ಹುಲಿ ವೇಷ ಸೇರಿದಂತೆ ವಿವಿಧ ಕಲಾ ತಂಡಗಳು ಕಾರ್ಯಕ್ರಮದ ಮೆರುಗು ಹೆಚ್ಚಿಸಿದವು. ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್ ಎಂ.ಪಿ. ಅವರು ಸಂವಿಧಾನದ ಪೀಠಿಕೆ ಪ್ರಮಾಣವಚನ ಬೋಧಿಸಿದರು. ಕೊನೆಯಲ್ಲಿ ಎರಡೂ ಕೈಗಳನ್ನು ಮೇಲಕ್ಕೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಲಾಯಿತು. ಅತಿಥಿಗಳೂ ಸೇರಿದಂತೆ ಹಲವರು ಮಾನವ ಸರಪಳಿಯಲ್ಲಿ ಭಾಗಿಯಾದರು. ವಿವಿಧ ಕಲಾ ತಂಡಗಳ ಪ್ರತಿಭಾ ಪ್ರದರ್ಶನದೊಂದಿಗೆ ಮೆರವಣಿಗೆ ಮೂಲಕ ಸಾಗಿ ಕದ್ರಿ ಪಾರ್ಕ್‌ನಲ್ಲಿ ಗಿಡ ನೆಡುವ ಕಾರ್ಯಕ್ರಮ ನೆರವೇರಿತು. ಜಿಲ್ಲೆಯಾದ್ಯಂತ ಸಾವಿರಕ್ಕೂ ಅಧಿಕ ಗಿಡ ನೆಡಲಾಯಿತು.