Advertisement

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

11:53 AM Sep 15, 2024 | Team Udayavani |

ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಕಾನೂನು ಸಂಸದೀಯ, ಪ್ರವಾಸೋದ್ಯಮ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್‌ ಅವರು ಸೆ.15ರ ಭಾನುವಾರ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಂಡು ಸಂವಿಧಾನ ಪೀಠಿಕೆಯ ಪ್ರಸ್ತಾವನೆಯನ್ನು ಓದಿದರು.

Advertisement

ಎಚ್.ಕೆ.ಪಾಟೀಲ ಮಾತನಾಡಿ, ಶೋಷಿತರು, ದಲಿತರು, ಬಡವರು, ಅಸಹಾಯಕರಿಗೆ ಧ್ವನಿ, ಶಕ್ತಿಯನ್ನು ತುಂಬಲು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಜಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಪುರಸಭೆ ಅಧ್ಯಕ್ಷೆ ನಿರ್ಮಲಾ ಕೋರ್ಲಹಳ್ಳಿ, ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಬಿ.ಸುಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಮಹೇಶ ಪೋತದಾರ ಮತ್ತಿತರರು ಪಾಲ್ಗೊಂಡಿದ್ದರು.

content-img

Advertisement

Udayavani is now on Telegram. Click here to join our channel and stay updated with the latest news.