Advertisement
ದೇಶಕ್ಕೆ ಸ್ವಾತಂತ್ರ್ಯ ದೊರೆತು 70 ವರ್ಷಗಳು ಕಳೆದಿದ್ದು, ಪ್ರಸ್ತುತ ದೇಶದೆಲ್ಲೆಡೆ 71ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಆದರೆ ದೇಶದಲ್ಲಿ ಇಂದಿಗೂ ಅನೇಕ ಸಮಸ್ಯೆಗಳು ಹಾಗೂ ಸವಾಲುಗಳು ಕಾಡುತ್ತಿದ್ದು, ಹೀಗಾಗಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಆ ಮೂಲಕ ಏಕತೆಯಿಂದ ಎಲ್ಲಾ ಸವಾಲುಗಳನ್ನು ಎದುರಿಸಿ ದೇಶದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಭಾ ರತವನ್ನು ವಿಶ್ವದಲ್ಲೇ ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಬೇಕಿದೆ ಎಂದು ಹೇಳಿದರು.
Related Articles
Advertisement
ಮಳೆಯಿಂದಾಗಿ ಪಥಸಂಚಲನಕ್ಕೆ ಅಡ್ಡಿ: ಸೋಮವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಅನೇಕ ಕಡೆಗಳಲ್ಲಿ ನೀರು ನಿಂತಿದ್ದರಿಂದ ಸ್ವಾತಂತ್ರ್ಯೋತ್ಸವದ ಪಥಸಂಚಲನ ನಡೆಸಲು ಸಾಧ್ಯವಾಗಲಿಲ್ಲ. ಆಕರ್ಷಕ ಪಥಸಂಚಲನದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲು ಸಿದ್ಧರಾಗಿ ಬಂದಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ತುಕಡಿಗಳ ಪೊಲೀಸರು ಹಾಗೂ ಕರುಣಾಮಯಿ ಫೌಂಡೇಷನ್ ಟ್ರಸ್ಟ್‌ನ ಅಂಧ ಮಕ್ಕಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಗೌರವ ವಂದನೆ ಸಲ್ಲಿಸಿ, ಪಥಸಂಚಲನ ನಡೆಸದೆ ನಿರ್ಗಮಿಸಿದರು.
ಸಾಂಸ್ಕೃತಿಕ ಮೆರಗು: ಮಳೆಯ ನಡುವೆಯೂ ವಿವಿಧ ಶಾಲೆಗಳ ಮಕ್ಕಳು ನೃತ್ಯ ಪ್ರದರ್ಶನ ನೀಡುವ ಮೂಲಕ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಮೆರಗು ನೀಡಿದರು. ಶಕ್ತಿನಗರದ ಅಧ್ಯಯನ ಪ್ರೌಢಶಾಲೆ ಮಕ್ಕಳು ನೇಗಿಲಯೋಗಿ ಹಾಡಿಗೆ ಹೆಜ್ಜೆ ಹಾಕಿದರೆ, ಎನ್.ಆರ್.ಮೊಹಲ್ಲಾದ ಸೇಂಟ್ ಆನ್ಸ್ ಶಾಲೆ ಮಕ್ಕಳು ಸಾಮಾಜಿಕ ಪಿಡುಗಿಗೆ ಸಂಬಂಧಿಸಿದಂತೆ ನೃತ್ಯ ರೂಪಕ, ಪೀಪಲ್ಸ್ ಪಾರ್ಕ್‌ನ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಬಾಗದ ಮಕ್ಕಳು ಬಾರತಾಂಬೆ ನಿನ್ನ ಜನುಮದಿನ ಗೀತಗೆ ನೃತ್ಯ ಮಾಡಿ ಗಮನ ಸೆಳೆದರು.
ಲ್ಯಾಪ್‌ಟಾಪ್ ವಿತರಣೆ: ಸಮಾರಂಭದ ಅಂಗವಾಗಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಉತ್ತೀರ್ಣರಾಗಿರುವ ಜಿಲ್ಲೆಯ ಐವರು ವಿದ್ಯಾರ್ಥಿಗಳಿಗೆ ಸಚಿವರು ಲ್ಯಾಪ್‌ಟಾಪ್ ವಿತರಿಸಿದರು. ಹುಣಸೂರು ತಾಲೂಕು ಗಾವಡಗೆರೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಎಂ.ಪೂಜಾ, ಗುರುಪುರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಬಿ.ಹೃತಿಕ್, ಎಚ್.ಡಿ.ಕೋಟೆ ತಾಲೂಕಿನ ಯರಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಬಿ.ಎನ್ ಸುಷ್ಮಾ, ಮೈಸೂರು ತಾಲೂಕು ಬೀರಿಹುಂಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಮಹಾಲಕ್ಷ್ಮೀ, ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಿ.ಕೆ.ರಮೇಶ್ ಅವರಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.