Advertisement

ಜನಸಂಖ್ಯಾ ನಿಯಂತ್ರಣ; ಮೂಡಬೇಕಿದೆ ಜಾಗೃತಿ: ದಿನಕರ ಬಾಬು

02:25 AM Jul 12, 2017 | Harsha Rao |

ಉಡುಪಿ: ಮಾನವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಳ್ಳದೆ ಇದ್ದಲ್ಲಿ ಹಾಗೂ ವಿಶ್ವದಾದ್ಯಂತ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸದೇ ಇದ್ದಲ್ಲಿ ಮಾನವನಿಂದಲೇ ಮನುಕುಲದ ವಿನಾಶ ಆಗುವ ಕಾಲ ದೂರವಿಲ್ಲ. ಜನಸಂಖ್ಯೆ ನಿಯಂತ್ರಿಸುವ ಬಗ್ಗೆ ಎಲ್ಲರಲ್ಲರೂ ಜಾಗೃತಿ ಮೂಡಬೇಕಿದೆ ಎಂದು ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದರು.

Advertisement

ಉಡುಪಿಯ ಸರಕಾರಿ  ಬಾಲಕಿಯರ ಪ. ಪೂ. ಕಾಲೇಜಿನಲ್ಲಿ, ಜಿ. ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಸರಕಾರಿ ನೌಕರರ ಜಿಲ್ಲಾ ಸಂಘ, ಸರಕಾರಿ  ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಮಂಗಳವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕರಪತ್ರ ಜಿ. ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ  ಬಿಡುಗಡೆ ಮಾಡಿದರು. ಉಡುಪಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅಧ್ಯಕ್ಷತೆ ವಹಿಸಿದ್ದರು. ಜನಸಂಖ್ಯೆ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜನಸಂಖ್ಯೆ ದಿನಾಚರಣೆ ಕುರಿತ ಜಾಥಾ ಹಾಗೂ ಆಶಾ ಕಾರ್ಯಕರ್ತೆಯರಿಂದ ಕಿರು ನಾಟಕ ಪ್ರದರ್ಶನ ನಡೆಯಿತು.

ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಡಿಎಚ್‌ಒ (ಪ್ರಭಾರ) ಡಾ| ಎಂ.ಜಿ. ರಾಮ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ., ಸರಕಾರಿ ಬಾಲಕಿಯರ ಪ. ಪೂ. ಕಾಲೇಜಿನ ಪ್ರಾಂಶುಪಾಲ ಜಗದೀಶ್‌ ಕುಮಾರ್‌, ಪ್ರೌಢಶಾಲೆ ಮುಖ್ಯೋಪಧ್ಯಾಯ ವಿಶ್ವನಾಥ ಬಾಯರಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್‌ ಉಪಸ್ಥಿತರಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರತ್ನ ಸ್ವಾಗತಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ. ರಾಮ ರಾವ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next