Advertisement

ಜನಸಂಖ್ಯಾ ನಿಯಂತ್ರಣಕ್ಕೆ ಪ್ರತಿಯೊಬ್ಬರ ಜವಾಬ್ದಾರಿ ಅವಶ್ಯ

04:31 PM Aug 01, 2017 | Team Udayavani |

ಶಿಡ್ಲಘಟ್ಟ: ಜನಸಂಖ್ಯೆ ಸ್ಫೋಟ ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ನಾಗರಿಕರು ಸ್ವಯಂ ಪ್ರೇರಿತರಾಗಿ ಜನಸಂಖ್ಯೆ ನಿಯಂತ್ರಣದ ಜವಾಬ್ದಾರಿ ವಹಿಸಬೇಕು ಎಂದು ಶಾಸಕ ಎಂ.ರಾಜಣ್ಣ ಸಲಹೆ ನೀಡಿದರು.

Advertisement

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಬಡತನ, ಅಜ್ಞಾನ, ಅನಕ್ಷರತೆ, ಮೂಢನಂಬಿಕೆ ಹಾಗೂ ಬಾಲ್ಯವಿವಾಹ ಇತ್ಯಾದಿ ಕಾರಣಗಳಿಂದ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಜನಸಂಖ್ಯೆ ಹೆಚ್ಚಾದಂತೆಲ್ಲಾ ದೇಶದಲ್ಲಿ ಅನೇಕ ಸಮಸ್ಯೆಗಳು ಉದ್ವವಿಸುತ್ತಿವೆ ಮೂಲಭೂತ ಸೌಕರ್ಯಗಳಾದ ಮನೆ, ನೀರು , ನಿರುದ್ಯೋಗ ಸಮಸ್ಯೆ, ಮುಂತಾದ ಸಮಸ್ಯೆಗಳಿಗೆಲ್ಲ ಶಿಕ್ಷನವೊಂದೇ ಪರಿಹಾರ ಎಂದರು.

ತಹಶೀಲ್ದಾರ್‌ ಅಜೀತ್‌ಕುಮಾರ್‌ ರೈ ಮಾತನಾಡಿ, ಜನಸಂಖ್ಯೆ ಹೆಚ್ಚಾದಂತೆಲ್ಲಾ ನಿರುದ್ಯೋಗ ಸಮಸ್ಯೆ ಸಹ ಹೆಚ್ಚಾಗುತ್ತಿದ್ದು, ಎಲ್ಲರಿಗೂ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿಲ್ಲ, ಯುವಕರು ಸರ್ಕಾರ ಕೊಡುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗ ಪ್ರಾರಂಭಿಸಿ, ಬೇರೆಯವರಿಗೂ ಉದ್ಯೋಗ ನೀಡಿ ಎಂದು ತಿಳಿಸಿದರು.

ಇದೇ ವೇಳೆಯಲ್ಲಿ ಜನಸಂಖ್ಯೆ ನಿಯಂತ್ರಣ ಮಾಡಲು ಜನರಲ್ಲಿ ಜಾಗೃತಿ ಮೂಡಿಸಲು ಶಾಲಾ ವಿದ್ಯಾರ್ಥಿಗಳೊಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜನ ಜಾಗೃತಿ ಜಾಥ ನಡೆಸಿದರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಮೂಡಿಸಿದರು.

Advertisement

ನಗರಸಭಾ ಉಪಾಧ್ಯಕ್ಷೆ ಪ್ರಭಾವತಿ, ಪೌರಾಯುಕ್ತ ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಿಡಿಪಿಒ ಲಕ್ಷ್ಮೀದೇವಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್‌, ಸಹಾಯಕ ಆರೋಗ್ಯಾಧಿಕಾರಿ ದಾದಾಪೀರ್‌,ಬಿಪಿಎಂ ನಂದಿನಿ,ಹಿರಿಯ ಆರೋಗ್ಯ ಸಹಾಯಕಿ ಮುನಿರತ್ನಮ್ಮ,ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next