Advertisement

ಗ್ರಾಮೀಣ ಪ್ರದೇಶಗಳಿಗೂ ತಲುಪಿದ ಡೆಂಘೀ ದಾಳಿ

11:20 AM May 17, 2019 | Team Udayavani |
ಬೆಂಗಳೂರು: ನಗರ ಪ್ರದೇಶಗಳಿಗಷ್ಟೇ ಸೀಮಿತವಾಗಿದ್ದ ಡೆಂಘೀ ಜ್ವರ, ಗ್ರಾಮೀಣ ಪ್ರದೇಶಗಳಿಗೂ ಹರಡುತ್ತಿದೆ ಎಂದು ರೋಗವಾಹಕ ಆಶ್ರಿತ ರೋಗಗಳ ಇಲಾಖೆ ಜಂಟಿ ನಿರ್ದೇಶಕ ಡಾ.ಶಿವರಾಜ್‌ ಸಜ್ಜನ್‌ ಶೆಟ್ಟಿ ಹೇಳಿದರು.
ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹಾಗೂ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಗುರುವಾರ ವೈದ್ಯಕೀಯ ವಿದ್ಯಾಲಯದಲ್ಲಿ ಆಯೋಜಿ ಸಿದ್ದ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ 17,844 ಡೆಂಘೀ ಪ್ರಕರಣಗಳು ದಾಖಲಾಗಿ  ದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಇಲಾಖೆ ಡೆಂಘೀ ಜ್ವರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತಿದೆ. ಇದರಿಂದ ಇತ್ತೀಚಿನ ದಿನಗಳಲ್ಲಿ ಡೆಂಘೀ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿವೆ. ಕಳೆದ ವರ್ಷ 4848 ಡೆಂಘೀ ಪ್ರಕರಣಗಳು ದಾಖಲಾಗಿದ್ದವು ಎಂದು ಹೇಳಿದರು.
ಡೆಂಘೀ ಜ್ವರವನ್ನು ತಡೆಯಲು ಬೇಕಾದ ಪ್ಲೇಟ್ಲೆಟ್‌ಗಳಿಗೆ (ರಕ್ತಕಣ) ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ನಿಗದಿಮಾಡಿದ್ದರ ಬಗ್ಗೆ ದೂರು ಕೇಳಿಬಂದಿತ್ತು. ಇದರಿಂದ ಸರ್ಕಾರವೇ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಪ್ಲೇಟ್ಲೆಟ್‌ ಪ್ಯಾಕೇಟ್‌ಗೆ 800 ರೂ.ಮತ್ತು ಡೆಂಘೀ ಜ್ವರ ಪರೀಕ್ಷೆಗೆ 250 ರೂ. ಶುಲ್ಕ ನಿಗದಿ ಮಾಡಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಪ್ಲೇಟ್ಲೆಟ್‌ ಉಚಿತವಾಗಿ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಡೆಂಘೀ ರೋಗಿಗಳಿಗೆ ಐದು ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ ಎಂದರು.
ಆಶ್ರಿತ ರೋಗಗಳ ಸಂಶೋಧನಾ ಅಧಿಕಾರಿ ಡಾ.ಮಹಮದ್‌ ಶರೀಫ್, ಡೆಂಘೀ ಜ್ವರ ಸೋಂಕಿತ ಈಡೀಸ್‌ ಸೊಳ್ಳೆ (ಟೈಗರ್‌
ಮಸ್ಕಿಟೋ)ಗಳಿಂದ ಹರಡುತ್ತದೆ. ಸೋಂಕು ಇರುವ ವ್ಯಕ್ತಿಗೆ ಕಚ್ಚುವ ಸೊಳ್ಳೆ ಮತ್ತೂಬ್ಬರಿಗೆ ಕಚ್ಚಿದರೆ ಆರೋಗ್ಯವಂತ ವ್ಯಕ್ತಿಗೂ ಜ್ವರ ಹಬ್ಬುತ್ತದೆ. ಈ ಸೊಳ್ಳೆಗಳನ್ನು ನಿಯಂತ್ರಿಸುವುದರಿಂದ ಜಿಕಾ ವೈರಸ್‌, ಹಳದಿ ಜ್ವರ ಮತ್ತು ಇಡಿಸಿಎ ರೋಗಗಳನ್ನು ತಡೆಯಬಹುದು.
ಡೆಂಘೀ ಜ್ವರವನ್ನು ತಡೆಯುವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಜುಲೈ ತಿಂಗಳಲ್ಲಿ ಡೆಂಘೀಗೆ ಸಂಬಂಧಿಸಿದ
ವಿಷಯಗಳ ಬಗ್ಗೆ ಕಾಲೇಜುಗಳಲ್ಲಿ ಸ್ಪರ್ಧೆ, ಜಾಥಾ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಗರದಲ್ಲಿ ಈ ವರ್ಷ 311 ಪ್ರಕರಣ ಪತ್ತೆ ರಾಜ್ಯದಲ್ಲಿ ಅತೀ ಹೆಚ್ಚು ಡೆಂಘೀ ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗುತ್ತಿವೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2018ರಲ್ಲಿ ಶೇ.26ರಷ್ಟು ಪ್ರಕರಣ ಬೆಂಗಳೂರಿನಲ್ಲೇ ದಾಖಲಾಗಿವೆ. ಈ ವರ್ಷ ಜನವರಿಯಿಂದ ಇದುವರೆಗೆ ರಾಜ್ಯದಲ್ಲಿ 716 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲೇ 311 ಪ್ರಕರಣಗಳು ಪತ್ತೆಯಾಗಿದೆ.
“ನೈರ್ಮಲ್ಯದ ಕೊರತೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆ ನಡೆಸುವ ಜಾಗೃತಿ ಅಭಿಯಾನ ಕಾರ್ಯಕ್ರಮಗಳಿಗೆ ಬಿಬಿಎಂಪಿ ಅಧಿಕಾರಿಗಳು ಗೈರಾಗುತ್ತಿದ್ದು, ಸೊಳ್ಳೆ ಲಾರ್ವ ನಾಶ ಮತ್ತು ಜಾಗೃತಿಗೆ ಇನ್ನಷ್ಟು ಕ್ರಮ ತೆಗೆದುಕೊಳ್ಳಬೇಕು ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿ.
Advertisement

Udayavani is now on Telegram. Click here to join our channel and stay updated with the latest news.

Next