Advertisement

ಮುಂಜಾಗ್ರತಾ ಕ್ರಮಗಳಿಂದ ರೋಗ ನಿಯಂತ್ರಣ

09:20 PM May 17, 2019 | Team Udayavani |

ಮಡಿಕೇರಿ: ಜಿಲ್ಲಾ ಪಂಚಾಯತ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಪ್ರಯುಕ್ತ ನಡೆದ ಅರಿವು ಜಾಥ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌ ಅವರು ಚಾಲನೆ ನೀಡಿದರು.

Advertisement

ಜಾಥಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌ ಅವರು ರಾಷ್ಟ್ರೀಯ ಡೆಂಗ್ಯು ನಿಯಂತ್ರಣ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಲ್ಲಿ ಡೆಂಗ್ಯು ರೋಗ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಈ ಜಾಥದ ಮುಖ್ಯ ಉದ್ದೇಶವಾಗಿದೆ ಎಂದರು.

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಂಡು ಡೆಂಗ್ಯು ರೋಗ ಬಾರದಂತೆ ಎಚ್ಚರವಹಿಸಬೇಕು ಎಂದು ಅವರು ತಿಳಿಸಿದರು.

ಹೆಚ್ಚಿನ ಜಾಗೃತಿ
ಜಿಲ್ಲಾ ಕ್ಷಯರೋಗ ನಿಯಂತ್ರಣಾ ಧಿಕಾರಿ ಡಾ| ಶಿವಕುಮಾರ್‌ ಅವರು ಮಾತನಾಡಿ ರಾಷ್ಟ್ರೀಯ ಡೆಂಗ್ಯು ನಿಯಂತ್ರಣ ದಿನಾಚರಣೆ ಪ್ರಯುಕ್ತ ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಪ್ರತೀ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಲಾರ್ವ ಉತ್ಪತ್ತಿ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜಾಥಾವು ಬಾಲಭವನದಿಂದ ಆರಂಭಗೊಂಡು ಖಾಸಗಿ ಬಸ್‌ ನಿಲ್ದಾಣದ ಮೂಲಕ ಜನರಲ್‌ ಕೆ.ಎಂ.ತಿಮ್ಮಯ್ಯ ವೃತ್ತದವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ಯಾರಾಮೆಡಿಕಲ್‌ ವಿದ್ಯಾರ್ಥಿಗಳು ಜಾಥದಲ್ಲಿ ಭಾಗವಹಿಸಿದ್ದರು.

Advertisement

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ರಾಮಚಂದ್ರ ಕಾಮತ್‌, ಡಾ.ಆನಂದ್‌, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next