Advertisement
ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಡೆಂಘಿ ಜ್ವರದ ಹರಡುವಿಕೆ, ನಿಯಂತ್ರಣ ಹಾಗೂ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನಸಮುದಾಯವನ್ನು ಜಾಗೃತಿಗೊಳಿಸಲು ನಡೆದ ಡೆಂಘಿ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ತಾಲೂಕ ಆರೋಗ್ಯಾಧಿಕಾರಿ ಡಾ| ರಾಮಾಂಜನೇಯ ಮಾತನಾಡಿ, ಪ್ರಸ್ತುತ ಮಳೆಗಾಲ ಪ್ರಾರಂಭವಾಗಿದ್ದು, ನೀರಿನ ಶೇಖರಣಾ ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ, ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತದೆ. ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಬೇಕು. ಮಲಗುವಾಗ ಸೊಳ್ಳೆಪರದೆ ಬಳಸಬೇಕು ಹಾಗೂ ವಾರಕ್ಕೊಮ್ಮೆ ನೀರು ಶೇಖರಣ ಸಲಕರಣೆಗಳನ್ನು ಖಾಲಿಮಾಡಿ, ಸ್ವಚ್ಛಗೊಳಿಸಿ ನೀರು ತುಂಬಿ ಮುಚ್ಚಿಡಬೇಕು. ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾದ ಎಲ್ಲಾ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು ಎಂದು ಹೇಳಿದರು.
ನಗರಾದ್ಯಂತ ಆರೋಗ್ಯ ಶಿಕ್ಷಣ ವಾಹಿನಿ ವಾಹನದಲ್ಲಿ ಡೆಂಘೀ ಜಾಗೃತಿ ಸಂದೇಶ ಬಿತ್ತರಿಸಲಾಯಿತು. ಡೆಂಘೀ ಜಾಗೃತಿ ಗೀತೆ, ಕರಪತ್ರಗಳನ್ನು ವಿತರಣೆ, ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಸ್ವಾಗತಿಸಿ, ನಿರೂಪಿಸಿದರು. ಕೊಪ್ಪಳ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ರಮೇಶ್ ಕೆ., ಜಿಲ್ಲಾ ವಿಬಿಡಿ ಸಲಹೆಗಾರ ಗಂಗಮ್ಮ ಹಾಗೂ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.