Advertisement

ಡೆಂಘೀ ಸಾವು ಮುಚ್ಚಿಡುತ್ತಿರುವ ಜಿಲ್ಲಾಡಳಿತ

11:53 AM Jul 10, 2017 | Team Udayavani |

ಮೈಸೂರು: ಮಾರಕ ಡೆಂಘೀ ಜ್ವರ ನಿಯಂತ್ರಣ ಮಾಡುವಲ್ಲಿ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ದೂರಿದರು. ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಡೆಂಘೀ ಜ್ವರದ ಪ್ರಕರಣಗಳು ವರದಿಯಾಗುತ್ತಿವೆ.

Advertisement

ಆದರೂ ಜಿಲ್ಲಾಡಳಿತ ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಪರಿಣಾಮ ಡೆಂಘೀ ಜ್ವರ ಇದೀಗ ವ್ಯಾಪಕವಾಗಿ ಹರಡಿದೆ ಎಂದರು. ಡೆಂಘೀ ಜ್ವರ ಬಂದು ರೋಗಿಗಳು ಸಾವನ್ನಪ್ಪಿರುವ ಪ್ರಕರಣಗಳನ್ನು ಜಿಲ್ಲಾಡಳಿತ ಮರೆಮಾಚಿದೆ. ಹೀಗಾಗಿ ಡೆಂಘೀಯಿಂದ ಸಾವನ್ನಪ್ಪಿರುವವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

ಮಾಹಿತಿಗಳನ್ನು ಕಲೆಹಾಕಿದ ನಂತರ ಜಿಲ್ಲಾಡಳಿತದ ವೈಫ‌ಲ್ಯದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಿಲ್ಲೆಯಾದ್ಯಂತ ವೈರಲ್‌ ಜ್ವರ ಹಾಗೂ ಡೆಂಘೀ ಜ್ವರ ಹಬ್ಬುತ್ತಿರುವ ಹಿನ್ನೆಲೆ ಡೆಂಘೀ ಪೀಡಿತರಿಗೆ ಆಸ್ಪತ್ರೆಗಳಲ್ಲಿ ಎದುರಾಗಿರುವ ರಕ್ತದ ಕೊರತೆ ನೀಗಿಸಲು ರಕ್ತದಾನ ಶಿಬಿರ ನಡೆಸುತ್ತಿರುವುದಾಗಿ ಹೇಳಿದರು.

ಆರ್‌ಬಿಐನ ನೂರಕ್ಕೂ ಹೆಚ್ಚು ನೌಕರರು ಹಾಗೂ ಯುವಕರು ಕಾರ್ಯಕ್ರಮದಲ್ಲಿ  ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ನಗರಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್‌, ಸೇಪ್‌ವೀಲ್ಸ್‌ ಮುಖ್ಯಸ್ಥ ಪ್ರಶಾಂತ್‌, ಬಿಜೆಪಿ ಮುಖಂಡರಾದ ಜೋಗಿ ಮಂಜು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next