Advertisement
ಮುಂಗಾರು ಮಳೆ ಆರಂಭವಾದ ನಂತರ ರಾಜಧಾನಿಯಲ್ಲಿ ಡೆಂಘೀ ಪ್ರಕರಣಗಳ ಹೆಚ್ಚಿವೆ. ಪೂರ್ವ ವಲಯ ವ್ಯಾಪ್ತಿಯಲ್ಲಿ ಪ್ರತಿ ದಿನ 15-20 ಪ್ರಕರಣಗಳು ಕಂಡಬರುತ್ತಿವೆ. ದಕ್ಷಿಣ ವಲಯದಲ್ಲೂ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Related Articles
Advertisement
ಡೆಂಘೀ ಜ್ವರದ ಪ್ರಮುಖ ಲಕ್ಷಣ ಬಿಳಿ ರಕ್ತ ಕಣಗಳು ಕಡಿಮೆಯಾಗುವಿಕೆ
ಎಲ್ಲಾ ಕೀಲುಗಳು, ಸ್ನಾಯುಗಳಲ್ಲಿ ಹೆಚ್ಚಾಗಿ ನೋವು ಕಾಣಿಸಿಕೊಳ್ಳುತ್ತದೆ
ದೇಹದ ತಾಪಮಾನ ಹೆಚ್ಚಾಗುತ್ತದೆ. ಜತೆಗೆ ಮೈ-ಕೈ ನೋವು ಭಾದಿಸುತ್ತದೆ
ತಲೆನೋವು, ಸುಸ್ತು, ಊಟ ಸೇರದಿರುವುದು, ತಲೆಭಾದೆ, ನಿಶ್ಯಕ್ತಿ ಉಂಟಾಗುತ್ತದೆ.
ವಾಂತಿ, ಭೇದಿ ಕೂಡ ಆಗುತ್ತದೆ. ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ.
ಡೆಂಘೀ ತಡೆಗಟ್ಟಲು ಏನು ಮಾಡಬೇಕು:
ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಉತ್ತಮ
ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಿಡಿ
ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬೇಡಿ
ಮನೆಯ ಸುತ್ತಲು ಹಾಗೂ ತಾರಸಿಯ ಮೇಲೆ ನೀರು ನಿಲ್ಲದಂತೆ ನಿಗಾ ಇಡಿ
ತೆಂಗಿನ ಚಿಪ್ಪು, ಟಯರ್ ನಂಥ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ
ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ 2-3 ದಿನಕ್ಕೊಮ್ಮೆ ನೀರು ಬದಲಿಸಿ ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಬಳಸಿ
ಸೊಳ್ಳೆಗಳನ್ನು ತಡೆಯಲು ಕಿಟಕಿ ಬಾಗಿಲುಗಳಿಗೆ ಮೆಶ್ ಹಾಕಿ ಅಥವಾ ಸೊಳ್ಳೆ ನಾಶಕ ಬಳಸಿ
ಹೋಟೆಲ್, ರಿಯಲ್ ಎಸ್ಟೇಟ್‌ದಾರರ ಜತೆ ಚರ್ಚೆ: ಹೆಚ್ಚೆಚ್ಚು ಡೆಂಘೀ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳ ಬಗ್ಗೆ ಜಾಗೃತೆ ವಹಿಸಿ, ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ವ್ಯಾಪ್ತಿ ಹೋಟೆಲ್ ಮಾಲೀಕರ ಮತ್ತು ರಿಯಲ್ ಎಸ್ಟೇಟ್ ಉದ್ಯಮಿದಾರರ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಹೊಸಕಟ್ಟಡಗಳು ಮತ್ತು ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೊಳಚೆ ಇರದಂತೆ ನೋಡಿಕೊಳ್ಳುವುದು. ಎಲ್ಲೆಂದರಲ್ಲಿ ಕಸ ಸುರಿಯದ ರೀತಿಯಲ್ಲಿ ನಿರ್ಮಾಣ ಕಟ್ಟಡಗಳನ್ನು ಸ್ವತ್ಛವಾಗಿಟ್ಟುಕೊಳ್ಳುವುದು. ಕಟ್ಟಡಗಳ ಸುತ್ತಮುತ್ತ ಎಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು. ಜತೆಗೆ ತಗ್ಗು ಪ್ರದೇಶ ನಿರ್ಮಾಣವಾಗದ ರೀತಿಯಲ್ಲಿ ನೋಡಿಕೊಳ್ಳುವಂತೆ ಕಟ್ಟಡದಾರರಿಗೆ ಸೂಚನೆ ನೀಡಲಾಗಿದೆ. ಜತೆಗೆ ಹೋಟೆಲ್‌ಗಳ ಗಲೀಜು ಎಲ್ಲೆಂದರಲ್ಲಿ ನಿಲ್ಲದಂತೆ ಎಚ್ಚರ ವಹಿಸುವಂತೆ ಹೋಟೆಲ್ ಮಾಲೀಕರಿಗೂ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಡೆಂಗ್ಯು ನಿಯಂತ್ರಣದಲ್ಲಿದೆ. ಆದರೆ ಕಳೆದ ತಿಂಗಳಿಗೆ ಹೋಲಿಕೆ ಮಾಡಿದಾಗ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 10- 15 ಏರಿಕೆ ಕಂಡು ಬಂದಿದೆ. ಈ ಬಗ್ಗೆ ಎಚ್ಚರಿಕೆ ವಹಿಸಲಾಗಿದ್ದು ಡೆಂಘೀ ಕುರಿತಂತೆ ಜನರಲ್ಲಿ ಹೆಚ್ಚಿನ ರೀತಿಯ ಜಾಗೃತಿ ಮೂಡಿಸಲಾಗುತ್ತಿದೆ. ●ಡಾ.ಕೆ.ವಿ.ತ್ರಿಲೋಕ್ ಚಂದ್ರ, ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ)
●ದೇವೇಶ ಸೂರಗುಪ್ಪ