Advertisement

ಗುತ್ತಿಗಾರು: ಹರಡುತ್ತಿದೆ ಡೆಂಗ್ಯೂ ಜ್ವರ

12:28 AM Jul 02, 2019 | mahesh |

ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಹಾಗೂ ಸಾಂಕ್ರಾಮಿಕ ಜ್ವರಬಾಧೆ ಮಿತಿ ಮೀರುತ್ತಿದ್ದು, ಗುತ್ತಿಗಾರಿನ ನಾಲ್ವರನ್ನು ವೈದ್ಯರು ಹೆಚ್ಚಿನ ಚಿಕಿತ್ಸೆಗೆ ನಗರ ಆಸ್ಪತ್ರೆಗೆ ಕಳುಹಿಸಿದ್ದಾರೆ.

Advertisement

ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಇಲಾಖೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಜ್ವರ ಬಾಧೆ ನಿಯಂತ್ರಣಕ್ಕೆ ಬರುತ್ತಿಲ್ಲ. ವಾತಾವರಣ ದಲ್ಲಿನ ಏರುಪೇರು ಹಾಗೂ ಬಿಸಿಲು- ಮಳೆಯಿಂದಾಗಿ ಜ್ವರಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಗುತ್ತಿಗಾರಿನ ಇಬ್ಬರಲ್ಲಿ ಡೆಂಗ್ಯೂ ಜ್ವರ ದೃಢಪಟ್ಟಿದ್ದರೆ, 10ಕ್ಕೂ ಅಧಿಕ ಮಂದಿಯ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಗುತ್ತಿಗಾರಿನಲ್ಲಿ ಚಿಕಿತ್ಸೆ ನೀಡುತ್ತಿರುವ ಖಾಸಗಿ ವೈದ್ಯರು ರವಿವಾರ ಹಾಗೂ ಸೋಮವಾರ ನಾಲ್ವರು ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಸುಳ್ಯ ಹಾಗೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

150ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ
ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬರುವ ಹೆಚ್ಚಿನ ರೋಗಿಗಳಲ್ಲಿ ಜ್ವರ ಬಾಧಿತರೇ ಜಾಸ್ತಿಯಾಗಿದ್ದಾರೆ. 150ಕ್ಕೂ ಹೆಚ್ಚು ಜ್ವರಪೀಡಿತರು ಪ್ರತಿದಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಾರೆ. ಪ್ರತಿ ಮನೆಯಲ್ಲೂ ಜ್ವರ ಬಾಧೆಗೆ ಒಳಗಾದವರು ಇದ್ದಾರೆ ಎಂದು ತಿಳಿದುಬಂದಿದೆ.

ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಡೆಂಗ್ಯೂ ಜ್ವರ ಪ್ರಕರಣ ಕಂಡುಬಂದಿದ್ದು, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಜಾಗೃತಿ ಪ್ರಚಾರ ನಡೆಯಿತು. ಗ್ರಾಮ ಪಂಚಾಯತ್‌ ಅಧ್ಯಕ್ಷ ಅಚ್ಯುತ ಗುತ್ತಿಗಾರು ಪ್ರಚಾರ ಆಂದೋಲನಕ್ಕೆ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚೈತ್ರಾ ಭಾನು, ಆರೋಗ್ಯ ನಿರೀಕ್ಷಕ ಬಸವರಾಜ್‌, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Advertisement

ಜನರಲ್ಲಿ ಅರಿವು ಅಗತ್ಯ
ಜನರು ಜ್ವರ ಬಂದಾಗ ಮನೆಯಲ್ಲಿ ಕೂರದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಯಾಗದಂತೆ ಜಾಗ್ರತೆ ವಹಿಸಬೇಕು. ಇದರಿಂದ ಜ್ವರ ನಿಯಂತ್ರಣಕ್ಕೆ ಬರಬಹುದು.
– ಡಾ| ಚೈತ್ರಾಭಾನು 
ವೈದ್ಯಾಧಿಕಾರಿಗಳು, ಗುತ್ತಿಗಾರು ಪ್ರಾ.ಆರೋಗ್ಯ ಕೇಂದ್ರ

ಕೃಷ್ಣಪ್ರಸಾದ್‌ ಕೋಲ್ಚಾರ್‌

Advertisement

Udayavani is now on Telegram. Click here to join our channel and stay updated with the latest news.

Next