Advertisement

Dengue ಹೆಚ್ಚಳ; ಹೈಕೋರ್ಟ್ ಗೆ ಸರಕಾರ ಸಮಗ್ರ ಮಾಹಿತಿ ಸಲ್ಲಿಸಲಿದೆ: ಸಚಿವ ಗುಂಡೂರಾವ್

07:32 PM Jul 11, 2024 | Team Udayavani |

ದಾವಣಗೆರೆ: ರಾಜ್ಯದಲ್ಲಿ ಡೆಂಗ್ಯೂ(Dengue) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ಸ್ವಪ್ರೇರಿತ ಪಿಐಎಲ್ ದಾಖಲು ಮಾಡಿಕೊಂಡಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಸಮಗ್ರ ಮಾಹಿತಿಯನ್ನ ಸರ್ಕಾರ ಸಲ್ಲಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡೆಂಘೀ ನಿಯಂತ್ರಣದಲ್ಲಿದೆ. ಶೇ.1 ರಷ್ಟು ಗಂಭೀರ ಪ್ರಕರಣಗಳಿವೆ. ಡೆಂಗ್ಯೂ ನಿಯಂತ್ರಣಕ್ಕೆ ಕಾರ್ಯಪಡೆ ರಚಿಸಲಾಗಿದೆ. ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಇಲ್ಲ ಎಂದರು.

ಡೆಂಘೀ ನಿಯಂತ್ರಣದ ನಿಟ್ಟಿನಲ್ಲಿ ಸೊಳ್ಳೆಗಳ ನಿರ್ಮೂಲನೆಗೆ ಲಾರ್ವಾ ಪರೀಕ್ಷೆ ನಡೆಸಲಾಗುತ್ತಿದೆ. ಡೆಂಗ್ಯೂ ನಿಯಂತ್ರಣ, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಮಾತ್ರವಲ್ಲ ಎಲ್ಲ ಇಲಾಖೆಗಳು ಸಮನ್ವಯತೆಯೊಂದಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಈವರೆಗೆ ಡೆಂಗ್ಯೂಯಿಂದ ಏಳು ಜನರು ಮೃತಪಟ್ಟಿದ್ದಾರೆ. ಶೇ.1ರಷ್ಟು ಗಂಭೀರ ಪ್ರಕರಣಗಳಿವೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಡೆಂಗ್ಯೂ ಪ್ರಕರಣ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂಬುದಾಗಿ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಡೆಂಗ್ಯೂ ತರುವಂತಹ ಸೊಳ್ಳೆಗಳಗಿಂತಲೂ ಹೆಚ್ಚು ಆರೋಪಗಳ ಹರಡುತ್ತಿ ದ್ದಾರೆ. ಇಂತಹ ವಿಷಯದಲ್ಲಿ ರಾಜಕೀಯ ಮಾಡುವುದು ಸರಿ ಅಲ್ಲ. ಅವರು ಸಹ ಡೆಂಗ್ಯೂ ನಿಯಂತ್ರಣದ ವಿಷಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದರು.

Advertisement

‘ಮುಡಾ ಹಗರಣದ ವಿರುದ್ಧ ಬಿಜೆಪಿಯವರು ರ್‍ಯಾಲಿ, ಹೋರಾಟ ನಡೆಸಲಿ. ಮುಡಾ, ವಾಲ್ಮೀಕಿ ವಿಚಾರಗಳ ಬಗ್ಗೆ ನಾವು ಸದನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಮಾತನಾಡುತ್ತೇವೆ, ತಕ್ಕ ಉತ್ತರ ನೀಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next