Advertisement

ಪದಗ್ರಹಣಕ್ಕೆ ಅನುಮತಿ ನಿರಾಕರಣೆ: ಸಿದ್ದು ಖಂಡನೆ

05:47 AM Jun 10, 2020 | Team Udayavani |

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ. ಪದಗ್ರಹಣ ಸಮಾರಂಭಕ್ಕೆ ಎರಡನೇ ಬಾರಿ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ತೀರ್ಮಾನ ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್‌ ರ್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮ ಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಅನ್ವಯ ಆಗುವುದೇ ಎಂದು ಪ್ರಶಿಸಿದ್ದಾರೆ. ನಾವು ಕಾನೂನಿನ ಅಡಿಯಲ್ಲೇ ಕಾರ್ಯಕ್ರಮ ಮಾಡಲಿದ್ದೇವೆ ಎಂದು  ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next