ರಾಜಸ್ಥಾನ: ಗರ್ಭಿಣಿಯೊಬ್ಬರು ಹೆರಿಗೆ ನೋವು ಕಾಣಿಸಿಕೊಂಡ ನಿಟ್ಟಿನಲ್ಲಿ ಹೆರಿಗೆಗೆಂದು ಆಸ್ಪತ್ರೆಗೆ ಬಂದರೆ ವೈದ್ಯರು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲು ಮಾಡದೆ ನಿರಾಕರಿಸಿದ ಪರಿಣಾಮ ಮಹಿಳೆ ಆಸ್ಪತ್ರೆಯ ಹೊರಭಾಗದಲ್ಲೇ ಮಗುವಿಗೆ ಜನ್ಮ ನೀಡಿದ ವಿಲಕ್ಷಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಆಕೆಯನ್ನು ರಾಜಸ್ಥಾನದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ, ಈ ವೇಳೆ ಆಸ್ಪತ್ರೆಯ ವೈದ್ಯರು ಮಹಿಳೆಯನ್ನು ದಾಖಲಿಸಲು ನಿರಾಕರಿಸಿದ್ದಾರೆ ಈ ವೇಳೆ ಮಹಿಳೆ ಆಸ್ಪತ್ರೆಯಿಂದ ಹೊರ ನಡೆಯುತ್ತಿದ್ದಂತೆ ಹೆರಿಗೆ ನೋವು ಜಾಸ್ತಿಯಾಗಿ ಆಸ್ಪತ್ರೆಯ ಹೊರಭಾಗದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ,
ಘಟನೆ ಸಂಬಂಧ ಕುಟುಂಬ ಸದಸ್ಯರು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಕಿಡಿಕಾರಿದ್ದಾರೆ ಅಲಲ್ದೆ ಮಹಿಳೆ ಆಸ್ಪತ್ರೆಯ ಹೊರ ಭಾಗದಲ್ಲಿ ಜನ್ಮ ನೀಡಿದ ವಿಚಾರದ ಕುರಿತು ಆಸ್ಪತ್ರೆಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ ವಿಚಾರ ದೊಡ್ಡ ಮಟ್ಟಕ್ಕೆ ಹೋಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಆಸ್ಪತ್ರೆಯ ಮೂವರು ವೈದ್ಯರನ್ನು ಅಮಾನತು ಮಾಡಿದ್ದಾರೆ.
ಅಲ್ಲದೆ ಘಟನೆ ಕುರಿತು ಹೇಳಿಕೆ ನೀಡಿದ ವೈದ್ಯಕೀಯ ಶಿಕ್ಷಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶುಭ್ರಾ ಸಿಂಗ್ ಆಸ್ಪತ್ರೆಯಲ್ಲಿ ನಡೆದ ಘಟನೆ ನಮ್ಮ ಗಮನಕ್ಕೆ ಬಂದಿದ್ದು ಪ್ರಕರಣಕ್ಕೆ ಸಂಬಂಧಿಸಿ ತನಿಖಾ ತಂಡವನ್ನು ರಚಿಸಲಾಗಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.
ಹೆರಿಗೆ ನೋವಿನಿಂದ ಬಂದ ಗರ್ಭಿಣಿಯನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿಸಿಕೊಳ್ಳದೆ ನಿರ್ಲಕ್ಷ್ಯವಹಿಸಿದ್ದ ಸರಕಾರಿ ಆಸ್ಪತ್ರೆಯ ಮೂವರು ವೈದ್ಯರಾದ ಕುಸುಮ್ ಸೈನಿ, ನೇಹಾ ರಾಜಾವತ್ ಮತ್ತು ಮನೋಜ್ ಅವರನ್ನು ಗುರುವಾರ ಅಮಾನತುಗೊಳಿಸಲಾಗಿದೆ.
ಘಟನೆ ಸಂಬಂಧ ಆಸ್ಪತ್ರೆಯ ಅಧೀಕ್ಷಕ ಡಾ ರಾಜೇಂದ್ರ ಸಿಂಗ್ ತನ್ವಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.