Advertisement

ಡಿನೋಟಿಫಿಕೇಷನ್‌ ಪ್ರಕರಣ: ಲೋಕಾ ಪೊಲೀಸರಿಗೆ ನೋಟಿಸ್‌

10:39 PM Sep 27, 2019 | Team Udayavani |

ಬೆಂಗಳೂರು: ಹಲಗೆವಡೇರಹಳ್ಳಿ ಅಕ್ರಮ ಡಿನೋಟಿಫಿ ಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯು ತ್ತಿರುವ ವಿಚಾರಣೆ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಅಧೀನ ನ್ಯಾಯಾಲಯದ ವಿಚಾರಣೆ ರದ್ದುಕೋರಿ ಎಚ್‌.ಡಿ. ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ಲೋಕಾಯುಕ್ತ ಪೊಲೀಸರು ಹಾಗೂ ದೂರುದಾರ ಎಂ.ಎಸ್‌. ಮಹದೇವಸ್ವಾಮಿಗೆ ನೋಟಿಸ್‌ ಜಾರಿಗೊಳಿಸಿತು. ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ, ವಿಚಾರಣೆಯನ್ನು ಅ.1ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next