Advertisement

ಡಿನೋಟಿಫಿಕೇಷನ್‌: ಸಿಎಂ ವಿರುದ್ಧದ ದೂರು ಹಿಂಪಡೆಯಲು ನಿರ್ಧಾರ

10:22 PM Dec 10, 2020 | mahesh |

ಬೆಂಗಳೂರು: ನಗರದ ಗಂಗೈನಹಳ್ಳಿಯ ಮಠದಹಳ್ಳಿ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಪಡಿಸಿಕೊಂಡಿದ್ದ 1 ಎಕರೆ 11 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್‌ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಿಸಿದ್ದ ದೂರನ್ನು ಹಿಂಪಡೆಯುವುದಾಗಿ ದೂರುದಾರರು ಹೈಕೋರ್ಟ್‌ಗೆ ಮೆಮೊ ಸಲ್ಲಿಸಿದ್ದಾರೆ.

Advertisement

ಪ್ರಕರಣ ಸಂಬಂಧ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ 2017ರಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ದೂರುದಾರ ಜಯಕುಮಾರ್‌ ಹಿರೇಮಠ ಪರ ವಕೀಲರು ಹಾಜರಾಗಿ, ಲೋಕಾಯುಕ್ತ ಪೊಲೀಸರಿಗೆ ದೂರು ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ಹಿಂಪಡೆಯಲು ಅನುಮತಿ ನೀಡುವಂತೆ ಕೋರಿ ಮೆಮೊ ಸಲ್ಲಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತು ದೂರುದಾರರು ವಿವರಣೆ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟು, ಡಿ.11ರಂದು ದೂರುದಾರರು ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next