ಯಡಿಯೂರಪ್ಪ ಮತ್ತು ಶಿವಕುಮಾರ್ ಸೇರಿ ಹಗರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ಇವರ ವಿರುದ್ಧದ ವಿಚಾರಣೆಗೆ ಸಮ್ಮತಿ ನೀಡಿದೆ.
Advertisement
ಕಬ್ಟಾಳೆಗೌಡ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ಕೆ.ಪರಮೇಶ್ವರ್, ಈ ಇಬ್ಬರು ಆರೋಪಿಗಳ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ರದ್ದು ಮಾಡುವ ಮೂಲಕ ಹೈಕೋರ್ಟ್ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಇವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕ್ರಿಮಿನಲ್ ಭ್ರಷ್ಟಾಚಾರವೆಸಗಿದ್ದಾರೆ ಎಂದು ಆರೋಪಿಸಿದರು. ಇನ್ನು 2003ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬೆಲೆ ಬಾಳುವ ಭೂಮಿಯೊಂದನ್ನು ಸ್ವಾಧೀನ ಪಡಿಸಿಕೊಂಡಿದ್ದರೂ, ಈ ಭೂಮಿಯನ್ನೇ 1.62 ಕೋಟಿಗೆ ಖರೀದಿ ಮಾಡಿದ್ದಾರೆ. ಪ್ರಕರಣದ ಆರೋಪಿ ಆಗಿನ ಸಬ್ ರಿಜಿಸ್ಟ್ರಾರ್ ಹಮೀದ್ ಅಲಿ ಎಂಬುವವರು, ಸರ್ಕಾರಿ ಭೂಮಿಯನ್ನು ಇನ್ನೊಬ್ಬರಿಗೆಪರಭಾರೆ ಮಾಡಬಾರದು ಎಂಬ ನಿಯಮವಿದ್ದರೂ ಅದನ್ನು ಮೀರಿ ಸಚಿವರ ಹೆಸರಿಗೆ ಮಾಡಿಕೊಟ್ಟಿದ್ದರು. ಇದು 3 ವರ್ಷದ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧ ಎಂದು ಅರ್ಜಿದಾರರು ಉಲ್ಲೇಖೀಸಿದ್ದಾರೆ.