Advertisement
ಡಿನೋಟಿಫಿಕೇಷನ್ ಪ್ರಕರಣದಿಂದ ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಹ್ಮಣ್ಯ ಅವರನ್ನು ಕೈಬಿಟ್ಟು ಲೋಕಾಯುಕ್ತ ಕೋರ್ಟ್ ಹೊರಡಿಸಿದ್ದ ಆದೇಶ ರದ್ದುಕೋರಿ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
Related Articles
ನಗರದ ಹೂವಿನಾಯಕನಳ್ಳಿ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಗಳಿಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 20 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ಆಲಂಪಾಷಾ 2011ರ ಆ.20ರಂದು ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು.
Advertisement
ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2012 ರ ಮೇ 21ರಂದು ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಕೆಲ ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ನ್ಯಾಯಾಲಯ 2016ರ ಜುಲೈ 25ರಂದು ಆರೋಪಿಗಳ ವಿರುದ್ಧದ ಚಾರ್ಚ್‌ಶೀಟ್ ರದ್ದುಪಡಿಸಿತ್ತು.ಇದನ್ನು ಪ್ರಶ್ನಿಸಿ ದೂರುದಾರ ಆಲಂಪಾಷಾ ಹೈಕೋರ್ಟ್ ಮೆಟ್ಟಿಲೇರಿದ್ದರು.