Advertisement

ಶಿಕ್ಷಣ ಇಲಾಖೆ ಸಮಸ್ಯೆ ಪರಿಹಾರಕ್ಕೆ ನಿರ್ಣಯ

02:55 PM Jan 05, 2021 | Suhan S |

ಶಿವಮೊಗ್ಗ: ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಶಿಕ್ಷಕರ ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ, ಸ್ಥಳೀಯವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾದ ಹಾಗೂ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿಯೇ ಇದೇಮೊದಲ ಬಾರಿಗೆ ಸಭೆಯನ್ನು ಏರ್ಪಡಿಸಿ, ಹಲವುಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

Advertisement

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದಅಧ್ಯಕ್ಷರ ಕೋರಿಕೆಯ ಮೇರೆಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ಜಿಪಂ ನಜೀರಸಾಬ್‌ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಮಾತನಾಡಿ, ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಖಾಯಂ ಪೂರ್ವ ಸೇವಾವ ಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವ, ಶಿಕ್ಷಕರ ಮೇಲೆ ಬಹುದಿನಗಳಿಂದಬಾಕಿ ಇರುವ ಇಲಾಖಾ ವಿಚಾರಣೆ ಬಾಕಿ, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬಮುಂತಾದ ಸಮಸ್ಯೆಗಳು ಜಿಲ್ಲೆಯ ಎಲ್ಲಾ ತಾಲೂಕುಕೇಂದ್ರಗಳಲ್ಲಿಯೂ ಬಾಕಿ ಇರುವುದು ಬೇಸರಸಂಗತಿಯಾಗಿದೆ. ಇವುಗಳನ್ನು ಅನಗತ್ಯ ವಿಳಂಬಕ್ಕೆ ಅವಕಾಶವಿಲ್ಲದಂತೆ ತ್ವರಿತಗತಿಯಲ್ಲಿ ವಿಲೇ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್‌. ವೈಶಾಲಿ ಅವರಲ್ಲಿ ಮನವಿ ಮಾಡಿದರು.

ಶಿಕ್ಷಕರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿದ್ದಲ್ಲಿ ಕೂಡಲೇ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಸರಿಯಲ್ಲ. ಅಧಿಕಾರ ದುರ್ಬಳಕೆಯಂತಹ ಪ್ರಕರಣಗಳಲ್ಲಿನಿಯಮಾನುಸಾರ ಕ್ರಮವಹಿಸುವ ಬಗ್ಗೆ ನೌಕರರ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದರು.

ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಸರ್ಕಾರ ಅಗತ್ಯವಾಗಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ ಪಡೆದು, ಕೂಡಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ಕೈಗೊಳ್ಳುವಂತೆತಿಳಿಸಿದ ಅವರು, ಶಿಕ್ಷಕರ ಮುಂಬಡ್ತಿಗೆ ಸಂಬಂ ಸಿದ ಕಡತಗಳನ್ನು ಕೂಡಲೇ ವಿಲೇ ಮಾಡುವಂತೆ ಮನವಿ ಮಾಡಿದರು.

Advertisement

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್‌. ವೈಶಾಲಿ ಮಾತನಾಡಿ, ಮುಂಬಡ್ತಿ ಮತ್ತುಕಾಲಮಿತಿ ಬಡ್ತಿಗೆ ಸಂಬಂ ಸಿದ ಕಡತಗಳನ್ನು ಕೂಡಲೇವಿಲೇವಾರಿ ಮಾಡುವಂತೆ ಸಂಬಂ ಧಿಸಿದ ಅ ಧಿಕಾರಿಗಳಿಗೆಸೂಚಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್‌.ಎಂ. ರಮೇಶ್‌ ಮಾತನಾಡಿ,ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಕೊಠಡಿಗಳ ಸಂಖ್ಯೆ ಸಾಕಷ್ಟಿದ್ದರೆ, ಅಂತಹ ಶಾಲೆಗಳಲ್ಲಿ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ನಿರಂತರವಾಗಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದರು. ‘

ಸಭೆಯಲ್ಲಿ ಡಯಟ್‌ ಪ್ರಾಂಶುಪಾಲ ಬಿ.ಆರ್‌. ಬಸವರಾಜು, ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್‌. ಮೋಹನ್‌ ಕುಮಾರ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next