Advertisement
ಫೆಬ್ರವರಿ ತಿಂಗಳ ಮಧ್ಯ ಭಾಗದಿಂದ ಉಷ್ಣಾಂಶದಲ್ಲಿ ಏರಿಕೆ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಕನಿಷ್ಠ 31ರಿಂದ ಗರಿಷ್ಠ 37ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗುತ್ತಿದೆ. ಕರಳುಬೇನೆ, ನಿರ್ಜಲೀಕರಣ, ವಾಂತಿ-ಭೇದಿ, ಕಣ್ಣಿನ ಉರಿ, ಚಿಕನ್ ಫಾಕ್ಸ್, ಟೈಫಾಯ್ಡ್, ಬಿಸಿಲಿನಿಂದ ತಲೆ ಸುತ್ತು, ಮೈಗ್ರೇನ್, ಸನ್ ಸ್ಟ್ರೋಕ್, ಮೂಗಿನಲ್ಲಿ ರಕ್ತ ಸುರಿಯುವುದು,ಅತಿಯಾದ ಸೂರ್ಯ ಕಿರಣಗಳಿಂದ ಚರ್ಮ ಸಮಸ್ಯೆಗಳು ಜನಸಾಮಾನ್ಯರನ್ನು ಹೆಚ್ಚಾಗಿ ಕಾಡುತ್ತಿವೆ. ಬಿಸಿಲಿನಿಂದ ಉಂಟಾಗುವ ಕಾಯಿಲೆಗಳ ಪ್ರಮಾಣ ತೀವ್ರಗೊಳ್ಳುತ್ತಿರು ವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
Related Articles
- ಮಧ್ಯಾಹ್ನ 12ರಿಂದ 3ರ ವರೆಗೆ ಹೊರಹೋಗುವುದನ್ನು ತಪ್ಪಿಸಬೇಕು
- ಮಧ್ಯಾಹ್ನ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು
- ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸ ತಪ್ಪಿಸಿ
- ಮದ್ಯಪಾನ, ಕಾರ್ಬೋನೇಟೆಡ್ ಪಾನೀಯಗಳು, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ
- ಹೆಚ್ಚು ಪ್ರೊಟೀನ್ ಭರಿತ , ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ
- ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲು ಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ
Advertisement
ಹೆಚ್ಚು ಅಪಾಯವಿರುವ ಗುಂಪು :
ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು
ಗರ್ಭಿಣಿಯರು
ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು
ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು
ಆರೋಗ್ಯ ಸಮಸ್ಯೆಗಳಿರುವವರು,
ರಕ್ತದ ಒತ್ತಡದಿಂದ ಬಳಲುತ್ತಿರುವವರು.