Advertisement

Department of Health: “ತೆರೆದಿಟ್ಟ ತಿಂಡಿ, ಕತ್ತರಿಸಿದ ಹಣ್ಣು ತಿನ್ನಬೇಡಿ’ʼ

11:24 AM Mar 03, 2024 | Team Udayavani |

ಬೆಂಗಳೂರು:  ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ತಾರಕಕ್ಕೇರುತ್ತಿದ್ದು ವಿವಿಧ ಜಿಲ್ಲೆಯಲ್ಲಿ ಜ್ವರ, ತಲೆ ನೋವು, ಕಣ್ಣಿನ ಸಮಸ್ಯೆ ಸೇರಿ ಇತರ ಅನಾರೋಗ್ಯದಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಹೊರಡಿಸಿದೆ.

Advertisement

ಫೆಬ್ರವರಿ ತಿಂಗಳ ಮಧ್ಯ ಭಾಗದಿಂದ ಉಷ್ಣಾಂಶದಲ್ಲಿ ಏರಿಕೆ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಕನಿಷ್ಠ 31ರಿಂದ ಗರಿಷ್ಠ 37ಡಿಗ್ರಿ ಸೆಲ್ಸಿಯಸ್‌ ವರೆಗೆ ಉಷ್ಣಾಂಶ ದಾಖಲಾಗುತ್ತಿದೆ. ಕರಳುಬೇನೆ, ನಿರ್ಜಲೀಕರಣ, ವಾಂತಿ-ಭೇದಿ, ಕಣ್ಣಿನ ಉರಿ, ಚಿಕನ್‌ ಫಾಕ್ಸ್, ಟೈಫಾಯ್ಡ್, ಬಿಸಿಲಿನಿಂದ ತಲೆ ಸುತ್ತು, ಮೈಗ್ರೇನ್‌, ಸನ್‌ ಸ್ಟ್ರೋಕ್‌, ಮೂಗಿನಲ್ಲಿ ರಕ್ತ ಸುರಿಯುವುದು,ಅತಿಯಾದ ಸೂರ್ಯ ಕಿರಣಗಳಿಂದ ಚರ್ಮ ಸಮಸ್ಯೆಗಳು ಜನಸಾಮಾನ್ಯರನ್ನು ಹೆಚ್ಚಾಗಿ ಕಾಡುತ್ತಿವೆ. ಬಿಸಿಲಿನಿಂದ ಉಂಟಾಗುವ ಕಾಯಿಲೆಗಳ ಪ್ರಮಾಣ ತೀವ್ರಗೊಳ್ಳುತ್ತಿರು ವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಹೆಚ್ಚಿನ ನೀರಿನ ಅಂಶದ ಆಹಾರ ಸೇವನೆ, ಕುದಿಸಿ ಆರಿಸಿದ ನೀರು ಸೇವಿಸಬೇಕು, ಬಿಸಿಯಾದ ಊಟ, ಶುದ್ಧವಾದ ಆಹಾರ ಸೇವನೆ, ಮಲ ವಿಸರ್ಜನೆಗೆ ಶೌಚಗೃಹ ಬಳಸಬೇಕು, ತೆರೆದಿಟ್ಟ ತಿಂಡಿ ಹಾಗೂ ಕತ್ತರಿಸಿ ಇಟ್ಟಿರುವ ಹಣ್ಣುಗಳನ್ನು ತಿನ್ನಬಾರದು, ಕೈ ಸ್ವತ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದೆ.

ಬೆವರು ರೂಪದಲ್ಲಿ ದೇಹದ ನೀರು ಹೊರ ಹೋಗು ವುದರಿಂದ ದೇಹದಲ್ಲಿ ತೇವಾಂಶ ಕಡಿಮೆಯಾಗುತ್ತದೆ. ದೇಹ ನಿರ್ಜಲೀಕರಣಗೊಳ್ಳುವುದರಿಂದ ಹಲವು ಸಮಸ್ಯೆ ಸೃಷ್ಟಿಯಾಗುತ್ತದೆ. ಹೀಗಾಗಿ ನೀರಿನ ಜತೆಗೆ, ದೇಹಕ್ಕೆ ಶಕ್ತಿ, ಚೈತನ್ಯ ತುಂಬುವಂತಹ ಹಣ್ಣಿನ ರಸ, ಪಾನೀಯ ಸೇವನೆ ಮೂಲಕ ನೀರಿನ ಅಂಶ ಹೆಚ್ಚಿಸಿ ಕೊಳ್ಳಬೇಕು. ಕಾಟನ್‌ ಉಡುಪು, ಬಿಸಿಲಿಗೆ ಹೋಗುವಾಗ ತಂಪು ಕನ್ನಡಕ, ಛತ್ರಿ ಬಳಕೆ ಸೇರಿ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮ ಪಾಲಿಸುವಂತೆ ಸೂಚಿಸಿದೆ.

ಎಚ್ಚರಿಕೆ ಸಲಹೆಗಳು :

  • ಮಧ್ಯಾಹ್ನ 12ರಿಂದ 3ರ ವರೆಗೆ ಹೊರಹೋಗುವುದನ್ನು ತಪ್ಪಿಸಬೇಕು
  • ಮಧ್ಯಾಹ್ನ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು
  • ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸ ತಪ್ಪಿಸಿ
  • ಮದ್ಯಪಾನ, ಕಾರ್ಬೋನೇಟೆಡ್‌ ಪಾನೀಯಗಳು, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ 
  • ಹೆಚ್ಚು ಪ್ರೊಟೀನ್‌ ಭರಿತ , ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ
  • ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲು ಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ
Advertisement

ಹೆಚ್ಚು ಅಪಾಯವಿರುವ ಗುಂಪು :

ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು

ಗರ್ಭಿಣಿಯರು

ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು

ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು

ಆರೋಗ್ಯ ಸಮಸ್ಯೆಗಳಿರುವವರು,

ರಕ್ತದ ಒತ್ತಡದಿಂದ ಬಳಲುತ್ತಿರುವವರು. 

 

 

Advertisement

Udayavani is now on Telegram. Click here to join our channel and stay updated with the latest news.

Next