Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಅಕಾಡೆಮಿಗಳ ಅಧ್ಯಕ್ಷರಿಗೂ ಕೊಕ್‌

10:06 PM Jul 31, 2019 | mahesh |

ಬೆಂಗಳೂರು: ಸಮ್ಮಿಶ್ರ ಸರಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ನಿಗಮ -ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರಿಗೆ ಕೊಕ್‌ ನೀಡಿದ್ದ ಬಿಜೆಪಿ ಸರಕಾರ, ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಆಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯನ್ನೂ ರದ್ದುಪಡಿಸಿದೆ.

Advertisement

ಕರ್ನಾಟಕ ಸಾಹಿತ್ಯ ಅಕಾಡೆಮಿ, ನಾಟಕ ಅಕಾಡೆಮಿ, ಜಾನಪದ ಅಕಾಡೆಮಿ, ಲಲಿತಕಲಾ ಅಕಾಡೆಮಿ, ಸಂಗೀತ -ನೃತ್ಯ ಅಕಾಡೆಮಿ, ಯಕ್ಷಗಾನ ಆಕಾಡೆಮಿ, ಬಯಲಾಟ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಸಾಹಿತ್ಯ ಅಕಾಡೆಮಿ, ಕೊಡವ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಆಕಾಡೆಮಿ, ಅರೆಭಾಷೆ ಸಾಹಿತ್ಯ-ಸಂಸ್ಕೃತಿ ಅಕಾಡೆಮಿ, ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಕುವೆಂಪು ಭಾಷಾ ಭಾರತಿ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ತತ್‌ಕ್ಷಣದಿಂದಲೇ ರದ್ದುಗೊಳಿಸಲಾಗಿಸದೆ ಎಂದು ಆದೇಶ ಹೊರಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರಕಾರದ ಕಾರ್ಯದರ್ಶಿ ಅವರನ್ನು ಮೇಲ್ಕಂಡ ಅಕಾಡೆಮಿ- ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next