Advertisement

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ

04:31 PM Jun 25, 2022 | Team Udayavani |

ಬೆಂಗಳೂರು: ರಾಜ್ಯದ ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಈ ಕುರಿತು ಟ್ವೀಟ್ ಮಾಡಿದ್ದು, ರಾಜ್ಯದ ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಲಾಗಿದೆ. 12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಮಹಾ ರಾಜಕೀಯ ಬಿಕ್ಕಟ್ಟು: ಬಂಡಾಯ ಶಾಸಕರ ಕಚೇರಿ ಮೇಲೆ ದಾಳಿ, ಪೊಲೀಸ್ ಹೈಅಲರ್ಟ್

ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಈ ಅಂಶ ಪುನರುಚ್ಛರಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಒಳಗೊಂಡಂತೆ) ಪದನಾಮವನ್ನು ಬದಲಾವಣೆ ಮಾಡಲಾಗಿದೆ. ಹೀಗಾಗಿ ತಕ್ಷಣಕ್ಕೆ ಜಾರಿಗೆ ಬರುಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣಗೊಳಿಸಿ ಆದೇಶಿಸಲಾಗಿದೆ.

Advertisement

Koo App

Advertisement

Udayavani is now on Telegram. Click here to join our channel and stay updated with the latest news.

Next