Advertisement

ಶಿಷ್ಟಾಚಾರ ಪಾಲನೆ ಕಂದಾಯ ಇಲಾಖೆ ಜವಾಬ್ದಾರಿ

09:43 PM Mar 02, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಶಿಷ್ಟಾಚಾರ ಪಾಲನೆ ಕಂದಾಯ ಇಲಾಖೆಯ ಕರ್ತವ್ಯಗಳಲ್ಲಿ ಪ್ರಮುಖ ಜವಾಬ್ದಾರಿ ಆಗಿದ್ದು, ಕಳೆದ ಎರಡು ವರ್ಷಗಳಿಂದ ಚಿಕ್ಕಬಳ್ಳಾಪುರ ತಾಲೂಕು ತಹಶೀಲ್ದಾರ್‌ ಆಗಿ ಕಾರ್ಯ ನಿರ್ವಹಿಸಿದ ಕೆ.ನರಸಿಂಹಮೂರ್ತಿ, ಶಿಷ್ಟಾಚಾರ ಪಾಲನೆಯಲ್ಲಿ ಜಿಲ್ಲೆಗೆ ಮಾದರಿ ಆಗಿದ್ದಾರೆ ಎಂದು ಉಪ ವಿಭಾಗಾಧಿಕಾರಿ ಎ.ಎನ್‌.ರಘುನಂದ್‌ ತಿಳಿಸಿದರು.

Advertisement

ನಗರದ ತಾಲೂಕು ಕಚೇರಿಯಲ್ಲಿ ಸೋಮವಾರ ಸಂಜೆ 5 ಗಂಟೆ ಸಮಯದಲ್ಲಿ ನೂತನ ತಹಶೀಲ್ದಾರ್‌ ನಾಗಪ್ರಶಾಂತ್‌ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಿ ಮಾತನಾಡಿದರು.

ಸಾರ್ವಜನಿಕರಿಗೆ ಸ್ಪಂದಿಸಲಿ: ಸರ್ಕಾರಿ ನೌಕರರಿಗೆ, ಅಧಿಕಾರಿಗಳಿಗೆ ಕೆಲಸ ಮಾಡಲು ನಿರ್ದಿಷ್ಟ ಸ್ಥಳ ಇರುವುದಿಲ್ಲ. ಸರ್ಕಾರ ವರ್ಗಾವಣೆ ಮಾಡಿದ ಸ್ಥಳಕ್ಕೆ ಹೋಗಿ ಜನರ ಸೇವೆ ಮಾಡಬೇಕು. ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ಕಾರ್ಯವೈಖರಿ, ಶಿಷ್ಟಾಚಾರ ಪಾಲನೆ ಇತರೆ ಅಧಿಕಾರಿಗಳಿಗೆ ಮಾದರಿ ಆಗಿತ್ತು. ನೂತನ ತಹಶೀಲ್ದಾರ್‌ ಸಹ ಅದೇ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಕಷ್ಟಸುಖಗಳಿಗೆ ಸ್ಪಂದಿಸಲಿ ಎಂದು ಶುಭ ಹಾರೈಸಿದರು.

ಪ್ರಾಮಾಣಿಕ ಕೆಲಸ: ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಮಾತನಾಡಿ, ತಾಲೂಕಿನಲ್ಲಿ ಮಾಡಿರುವ ಕೆಲಸ ಒಳ್ಳೆಯ ಅನುಭವ ನೀಡಿದೆ. ಕೆಲಸದ ವೇಳೆ ಯಾರಿಗಾದರೂ ನೋವಾಗುವ ರೀತಿಯಲ್ಲಿ ಮಾತನಾಡಿದ್ದರೆ ಕ್ಷಮೆ ಇರಲಿ ಎಂದು ಹೇಳಿ ಕೆಲಸದ ವಿಚಾರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ ಎಂದರು.

ಚಿಕ್ಕಬಳ್ಳಾಪುರ ತಾಲೂಕು ನೂತನ ತಹಶೀಲ್ದಾರ್‌ ಆಗಿ ಅಧಿಕಾರ ಸ್ವೀಕರಿಸಿದ ನಾಗಪ್ರಶಾಂತ್‌, ತಾಲೂಕಿನ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿ ವಿಶೇಷವಾಗಿ ಕಂದಾಯ ಇಲಾಖೆಯಲ್ಲಿ ರೈತರಿಗೆ ಆಗಬೇಕಾದ ಕಾರ್ಯಗಳ ಅನುಷ್ಠಾನಕ್ಕೆ ತಾವು ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿ, ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರ ಬಯಸಿದರು.

Advertisement

ನೂತನ ತಹಶೀಲ್ದಾರ್‌ಗೆ ಸ್ವಾಗತ: ಗ್ರೇಡ್‌-2 ತಹಶೀಲ್ದಾರ್‌ ಆಗಿ ಸ್ಥಳದ ನಿರೀಕ್ಷೆಯಲ್ಲಿದ್ದ ನಾಗಾಪ್ರಶಾಂತ್‌ರನ್ನು ಸರ್ಕಾರ ಚಿಕ್ಕಬಳ್ಳಾಪುರ ತಾಲೂಕಿಗೆ ನೂತನ ತಹಶೀಲ್ದಾರ್‌ ಆಗಿ ವರ್ಗಾಯಿಸಿದ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ವೇಳೆ ನೂತನ ತಹಶೀಲ್ದಾರ್‌ಗೆ ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಸೇರಿದಂತೆ ತಾಲೂಕು ಕಚೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು ಸ್ವಾಗತ ಕೋರಿದರು.

ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿರನ್ನು ತಾಲೂಕು ಕಚೇರಿ ಸಿಬ್ಬಂದಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ವಿವಿಧ ಶಾಖೆಗಳ ಮುಖ್ಯಸ್ಥರು, ಕಚೇರಿ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next