Advertisement
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಭರಮಪ್ಪ ಎಂಬುವರು 2019 ಮಾರ್ಚ್ ಅಂತ್ಯದಲ್ಲಿ ವಿದ್ಯಾರ್ಥಿಗಳಿಗೆ ತಲುಪಬೇಕಾದ ಸೌಲತ್ತುಗಳನ್ನು ವಂಚಿಸಿ ಸರ್ಕಾರದ ಸುಮಾರು 50 ಲಕ್ಷ ಅನುದಾನವನ್ನು ದುರುಪಯೋಗಪಡಿಸಿಕೊಂಡಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಿ ಎಂದು ಹಾಲಿ ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಮೋಹನ್‌ಕುಮಾರ್ ಅವರನ್ನು ಒತ್ತಾಯಿಸಿದರು.
Related Articles
Advertisement
ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಸದಸ್ಯ ಶಶಿಕುಮಾರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ರೋಗಿಗಳನ್ನು ವೈದ್ಯರು ಪರೀಕ್ಷಿಸದೇ ನಾಳೆ ಬನ್ನಿ ಎಂದು ಉಡಾಫೆ ಉತ್ತರ ನೀಡಿ ಕಳುಹಿಸುತ್ತಾರೆ. ಜನ ಪ್ರತಿನಿಧಿಯಾದ ನನಗೇ ಈರೀತಿಯಾದರೆ ಜನ ಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು. ನಿರ್ಲಕ್ಷ್ಯ ವಹಿಸಿರುವ ವೈದ್ಯರ ವಿರ್ಧುಧ ಕೂಡಲೇ ಕ್ರಮ ಕೈಗೊಳ್ಳುವಂತೆ ತಾಲೂಕು ಅರೋಗ್ಯಾಧಿಕಾರಿ ವಿಜಯ್ ಅವರನ್ನು ಒತ್ತಾಯಿಸಿತಿಳಿಸಿದರು.
ಪಡಿತರ ಬಯೋ ಮೆಟ್ರಿಕ್ ಸಮಸ್ಯೆ ಸರಿಪಡಿಸಿ: ಸದಸ್ಯ ಸೋಮಯ್ಯ ಮಾತನಾಡಿ, ಆಹಾರ ಇಲಾಖೆಯ ಅವಾಂತರದಿಂದ ಪರಿತರ ಚೀಟಿದಾರರು ಬೆರಳಚ್ಚು ನೀಡಲು ದಿನ ನಿತ್ಯ ಪರದಾಡುವಂತಾಗಿದ್ದು, ಬಡವರು ಕೂಲಿ ಕಾರ್ಮಿಕರ ಬೆರಳಚ್ಚು ನೀಡಲು ಬೆಳಗ್ಗೆಯಿಂದ ಸಂಜೆಯವರೆಗೆ ನ್ಯಾಯಬೆಲೆ ಅಂಗಡಿ ಮುಂದೆ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಯಾವಾಗ ನೋಡಿದರು ಸರ್ವರ್ ಇಲ್ಲ ಎಂದು ಅಂಗಡಿ ಮಾಲೀಕರು ಹೇಳುತ್ತಿದ್ದು ಇದರಿಂದ ಗ್ರಾಮೀಣ ಜನರು ಪರಿತಪಿಸುತ್ತಿದ್ದಾರೆ. ಖಾಸಗಿಯವರು ಬೆರಳಚ್ಚು ಪಡೆಯುವ ವ್ಯವಸ್ಥೆ ಕೈಗೊಳ್ಳಿ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದರು.