Advertisement

ಇಲಾಖಾ ಕಾರ್ಯದರ್ಶಿಗಳು ಜನರ ಬಳಿಗೆ ಹೋಗಬೇಕಿದೆ: ಸಿಎಂ

08:45 PM Aug 31, 2021 | Team Udayavani |

ಬೆಂಗಳೂರು: ಸರಕಾರದ ಕಾರ್ಯದರ್ಶಿಗಳು ಜಿಲ್ಲೆ, ತಾಲೂಕು ಹಾಗೂ ಹಳ್ಳಿಗಳಿಗೆ ಭೇಟಿ ನೀಡಿ ತಮ್ಮ ಇಲಾಖೆಯ ಕಾರ್ಯಕ್ರಮ ಅನುಷ್ಠಾನವನ್ನು ಖುದ್ದಾಗಿ ಪರಿಶೀಲಿಸಬೇಕು. ಯಾವುದಾದರೂ ತೊಡಕುಗಳಿದ್ದಲ್ಲಿ ಸ್ಥಳದಲ್ಲೇ ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

Advertisement

ಮಂಗಳವಾರ ವಿಕಾಸಸೌಧದಲ್ಲಿ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಜನರ ಬಳಿಗೆ ಹೋದಾಗ ಸರಕಾರ ಜನರಲ್ಲಿಗೆ ಹೋದಂತಾಗುತ್ತದೆ ಎಂದರು.

ಹಿರಿಯ ಅಧಿಕಾರಿಗಳ ಇಂಥ ಕ್ರಮಗಳಿಂದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತವೆ. ಆಡಳಿತದಲ್ಲಿ ಪಾರದರ್ಶಕತೆ ಇರಬೇಕು. ಇಲಾಖೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಿಸಬೇಕು ಹಾಗೂ ಕಡತ ವಿಲೇವಾರಿಯಲ್ಲಿ ವಿಳಂಬ ಮಾಡಬೇಡಿ. ಜನರು ಕಚೇರಿಗಳಿಗೆ ಭೇಟಿ ನೀಡಿದಾಗ ಗೌರವ, ಸೌಜನ್ಯದಿಂದ ನಡೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ: ‘ಇನ್ಸ್ಟಾ ಫಾಲೋವರ್ಸ್‍’ : ಅಲ್ಲು ಅರ್ಜುನ್ ಫಸ್ಟ್..ಯಶ್‍ಗೆ ಎಷ್ಟನೇ ಸ್ಥಾನ ?

ಆಡಳಿತ ಸುಧಾರಣೆಗೆ ಕ್ರಮ
ಆಡಳಿತ ಸುಧಾರಣ ಆಯೋಗದ ಶಿಫಾರಸುಗಳಲ್ಲಿ ಆಡಳಿತಾತ್ಮಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಿಶೀಲಿಸಲು ಸಲಹಾ ಸಮಿತಿಯನ್ನು ರಚಿಸಲಾಗುತ್ತಿದ್ದು, ನವೆಂಬರ್‌ 1ರಿಂದ ಹಲವು ಆಡಳಿತ ಸುಧಾರಣ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

Advertisement

ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ಒತ್ತು ನೀಡಿ
“ಸ್ವಚ್ಛ ಭಾರತ’ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರ ಅನುಷ್ಠಾನದಲ್ಲಿ ನಾವು ಹಿಂದುಳಿಯಬಾರದು. ಕೇಂದ್ರ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next