ನಡುವೆ ಗುಡ್ಡಗಾಡು ಪ್ರದೇಶದಲ್ಲಿರುವ ನಜರಾಪುರ ಫಾಲ್ಸ್ ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಫಾಲ್ಸ್ ಈ ಭಾಗದ ಒಳ್ಳೆಯ ಪ್ರವಾಸಿ ತಾಣ.
Advertisement
ಮಳೆಗಾಲ ಬಂತೆಂದರೆ ಈ ತಾಣ ಮಲೆನಾಡಿನ ಸೋಬಗನ್ನೇ ಮರೆಸುತ್ತದೆ. ಇತ್ತೀಚೆಗೆ ಸುರಿದ ಮಳೆಯಿಂದ ಮೈತುಂಬಿ ಹರಿಯುತ್ತಿರುವ ಇಲ್ಲಿನ ಫಾಲ್ಸ್ ವೀಕ್ಷಣೆಗೆ ಜಿಲ್ಲೆಯಲ್ಲದೇ ಕಲಬುರಗಿ, ಬೀದರ, ತೆಲಂಗಾಣ ಸೇರಿದಂತೆ ಹಲವೆಡೆಯಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ನೈಸರ್ಗಿಕ ತಾಣವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
Related Articles
Advertisement
ಜಲಪಾತಕ್ಕೆ ಈ ಹಿಂದೆ ಯಾದಗಿರಿಯ ಜಿಲ್ಲಾಧಿಕಾರಿಯಾಗಿದ್ದ ಎಫ್.ಆರ್. ಜಮಾದಾರ, ಮನೋಜ್ ಜೈನ್, ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಜಲಪಾತಕ್ಕೆ ಭೇಟಿ ನೀಡಿ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದರು. ಸುಮಾರು ವರ್ಷಗಳು ಉರುಳಿದರೂ ಭರವಸೆ ಇನ್ನೂ ಕನಸಾಗಿಯೇ ಉಳಿದಿದೆ. ಜಲಪಾತದ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ ಹಣ ಬಿಡುಗಡೆಯಾಗಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಜಲಪಾತ ಮಾತ್ರ ಅಭಿವೃದ್ಧಿಯಾಗಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಉತ್ತರಿಸಬೇಕಿದೆ.
ಜಿಲ್ಲೆಯ ಏಕೈಕ ಪ್ರವಾಸಿ ತಾಣವಾಗಿರುವ ನಜರಾಪುರ ಫಾಲ್ಸ್ ಅಭಿವೃದ್ಧಿಗೆ ಜಿಲ್ಲಾಡಳಿತ ಮುಂದಾಗಬೇಕು. ಜಲಪಾತ ವೀಕ್ಷಣೆಗೆ ಸೂಕ್ತ ವ್ಯವಸ್ಥೆಯಿಲ್ಲ. ಈ ಕುರಿತು ಕ್ರಮ ಕೈಗೊಳ್ಳಬೇಕು. ಅಭಿಮನ್ಯು, ಪ್ರವಾಸಿಗ ಅನೀಲ ಬಸೂದೆ