ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್ ‘ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಹೇಳಿಕೆಯೊಂದನ್ನು ನೀಡಿದ್ದಾರೆ. ಅದನ್ನು ಆಲೋಚಿಸಿ ಕೊಟ್ಟಿದ್ದಾರೋ ಗೊತ್ತಿಲ್ಲ. ಅದನ್ನು ತಿರುಚುವ ವಿಚಾರವಾಗಲಿ, ಸಮರ್ಥಿಸಿಕೊಳ್ಳುವುದಾಗಲಿ ಬೇಡ’ಎಂದರು.
‘ಸರ್ಕಾರ 5 ವರ್ಷಗಳ ಕಾಲ ಇರಲಿದೆ, ಜನ ಪರವಾದ ಕಾರ್ಯ ಮಾಡಲಿದೆ. ಬಿಜೆಪಿ ನಾಯಕರು ಎಲ್ಲಿ ತೂರಿಕೊಳ್ಳುವುದು ಎಂದು ಕಾದು ಕುಳಿತಿದ್ದಾರೆ’ ಎಂದರು.
‘ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್ ಒಂದು ದಿನವೂ ತೊಂದರೆ ನೀಡಿಲ್ಲ’ ಎಂದರು.
ಸಮ್ಮಿಶ್ರ ಸರ್ಕಾರದ ಆಯಸ್ಸಿನ ಕುರಿತು ಮಾಜಿ ಸಿಎಂ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬಳಿಕ ಸರ್ಕಾರ ಮತ್ತು ಕಾಂಗ್ರೆಸ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿದೆ.