Advertisement

ರಾಜ್‌ ಠಾಕ್ರೆ ಭೇಟಿಯಾದ ಉಪ ಮುಖ್ಯಮಂತ್ರಿ ಫ‌ಡ್ನವೀಸ್‌

10:17 PM Aug 29, 2022 | Team Udayavani |

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫ‌ಡ್ನವೀಸ್‌ ಅವರು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಅವರನ್ನು ಸೋಮವಾರ ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

Advertisement

ಮುಂಬರುವ ಬೃಹತ್‌ ಮುಂಬಯಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಎರಡೂ ಪಕ್ಷಗಳ ನಡುವೆ ಚುನಾವಣಾ ಪೂರ್ವ ಮೈತ್ರಿ ಏರ್ಪಡುವ ಸಾಧ್ಯತೆಗಳನ್ನು ಹುಟ್ಟುಹಾಕಿದೆ.

ಸೋಮವಾರ ಮುಂಜಾನೆ ರಾಜ್‌ ಠಾಕ್ರೆ ನಿವಾಸಕ್ಕೆ ಭೇಟಿ ನೀಡಿದ ಫ‌ಡ್ನವೀಸ್‌, ಸುಮಾರು ಒಂದು ಗಂಟೆ ಕಾಲ ಪರಸ್ಪರ ಮಾತುಕತೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next