ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಸದಾಶಿವನಗರ ನಿವಾಸದಲ್ಲಿ ಗುರುವಾರ ಬೆಳಗ್ಗೆ ಉಪಾಹಾರ ಕೂಟವನ್ನು ಆಯೋಜಿಸಿದ್ದು ಹಲವು ಕಾಂಗ್ರೆಸ್ ಪ್ರಮುಖ ನಾಯಕರು ಭಾಗಿಯಾಗಿ ಸರಕಾರ ಉಳಿಸಿಕೊಳ್ಳುವ ಸಲುವಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಆಪರೇಷನ್ ಕಮಲ ಆತಂಕ ಎದುರಾಗಿರುವ ಹಿನ್ನಲೆಯಲ್ಲಿ ಈ ಉಪಹಾರ ಕೂಟ ಮಹತ್ವ ಪಡೆದಿದೆ.
ಉಪಹಾರಕೂಟಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಗೃಹ ಸಚಿವ ಎಂ.ಬಿ.ಪಾಟೀಲ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆಹಲವರು ಆಗಮಿಸಿದ್ದಾರೆ.
ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಅಪ್ತರೆನಿಸಿಕೊಂಡಿರುವ ಶ್ರೀಮಂತ ಪಾಟೀಲ್ ಅವರೂ ಉಪಾಹಾರ ಕೂಟಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.