ನಗರದ ಸಂತ ಜೋಸೆಫರ ಕಾಲೇಜಿ ನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ 18 ವರ್ಷ ಪೂರ್ಣಗೊಂಡವರಿಗೆ ನಮೂನೆ-6 ಅರ್ಜಿ ಯನ್ನು ವಿತರಿಸಿ ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಪಿ.ಐ. ಶ್ರೀವಿದ್ಯಾ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಚುನಾವಣಾ ಅಯೋಗದ ನಿರ್ದೇಶನದಂತೆ ಜಿಲ್ಲೆಯ 530 ಮತಗಟ್ಟೆಗಳಲ್ಲಿ ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳ ಲಾಗಿದ್ದು, ಈ ಅವಕಾಶವನ್ನು ಅರ್ಹರು ಪಡೆದುಕೊಳ್ಳುವಂತೆ ಕೋರಿದರು.
Advertisement
ಹದಿನೆಂಟು ವರ್ಷ ಪೂರ್ಣಗೊಂಡು ಇದುವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗದಿದ್ದಲ್ಲಿ, ಮತದಾರರ ಪಟ್ಟಿಯಲ್ಲಿ ಹಲವು ಕಾರಣಗಳಿಂದ ಹೆಸರು ಬಿಟ್ಟು ಹೋಗಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ಮತದಾನದ ಗುರುತಿನ ಚೀಟಿ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ಮಾತನಾಡಿ ಈ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತಾಗಲು 18 ವರ್ಷ ಪೂರ್ಣಗೊಂಡವರಿಗೆ ಮತದಾರರ ಗುರುತಿನ ಚೀಟಿ ಪಡೆಯುವಂತಾಗಲು ಮಿಂಚಿನ ನೋಂದಣಿ ಅಭಿಯಾನ ಆಯೋಜಿಸಲಾಗಿದೆ. ಆ ದಿಸೆಯಲ್ಲಿ ಅರ್ಹರು ಬೂತ್ ಮಟ್ಟದ ಅಧಿಕಾರಿಗಳನ್ನು ಭೇಟಿ ಮಾಡಿ ಹೆಸರು ನೋಂದಾಯಿಸಿ ಕೊಳ್ಳುವಂತಾಗಬೇಕು. ಈ ಅವಕಾಶವು ಇದೇ ಎಪ್ರಿಲ್ 14ರ ವರೆಗೆ ಇದೆ ಎಂದು ಅವರು ತಿಳಿಸಿದರು.
ಉಪ ವಿಭಾಗಾಧಿಕಾರಿ ರಮೇಶ್ ಕೊನರೆಡ್ಡಿ ಅವರು ಮಾತನಾಡಿ ಪ್ರಜಾ ಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಮತದಾನವು ಪರಿಣಾಮಕಾರಿ ಸಾಧನ ವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ತಹಸೀಲ್ದಾರ್ ಶಾರದಾಂಭ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಪೌರಾಯುಕ್ತರಾದ ಬಿ.ಶುಭ ಇತರರು ಇದ್ದರು.