Advertisement

ತಾಲೂಕು ಕಚೇರಿ ಆರಂಭಿಸಲು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

03:33 PM Jan 01, 2018 | Team Udayavani |

ಸಿರವಾರ: ಸಿರವಾರ ನೂತನ ತಾಲೂಕು ಆಗಿ ಘೋಷಣೆ ಆಗಿದ್ದರಿಂದ ಪಟ್ಟಣದಲ್ಲಿ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳ ಸ್ಥಾಪನೆಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ ನೇತೃತ್ವದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದರು.

Advertisement

ಪಟ್ಟಣವು ನೂತನ ತಾಲೂಕು ಕೇಂದ್ರವಾಗಿ ರಚಿಸಿದ್ದು, ತಾಲೂಕಿನ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಅರ್ಜಿಗಳನ್ನು ಪರಿಶೀಲಿಸಿ ಅವುಗಳಿಗೆ ಮಾನ್ಯತೆ ನೀಡಲಾಗುವುದು ಎಂದು
ಜಿಲ್ಲಾಧಿಕಾರಿ ತಿಳಿಸಿದರು.

ಸರ್ಕಾರ ಅಧಿಕೃತವಾಗಿ ತಾಲೂಕು ಘೋಷಣೆ ಹೊರಡಿಸಿದ ನಂತರ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಸ್ಥಳಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ನಂತರ ನೀರಾವರಿ ಇಲಾಖೆ ಹಾಗೂ ಖಾಸಗಿ ಕಟ್ಟಡಗಳನ್ನು ವೀಕ್ಷಿಸಿ ಕಚೇರಿಗಳ ನಾಮಫಲಕ ಬರೆಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಊರಿನ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next