ನಾಲ್ಕು ದಿನಗಳಿಂದ ಕೊಡಗು ಜಿಲ್ಲೆ ಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಅವರು ಹೇಳಿದರು.
ಮಳೆ ಹೆಚ್ಚಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶ ನೀಡಿದರು.
ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ಬಲಮುರಿ, ವಿರಾಜಪೇಟೆ ತಾಲ್ಲೂಕಿನ ಕರಡಿ ಗೋಡು, ದುಬಾರೆ ಮತ್ತು ಲಕ್ಷ್ಮಣತೀರ್ಥ ಹಾಗೂ ಸೋಮವಾರಪೇಟೆ ತಾಲೂಕಿನ ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭದಲ್ಲಿ ಜಲಾವೃತವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾಗದಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಶೀಲ್ದಾರರು ಮತ್ತು ಸ್ಥಳೀಯ ಗ್ರಾ.ಪಂ.ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
Advertisement
ಭೂ ಕುಸಿತ ಹಾಗೂ ರಸ್ತೆಯ ಮೇಲೆ ಮರ ಬಿದ್ದು, ಸಾರಿಗೆ ಸಂಪರ್ಕ ಕಡಿದು ಹೋಗುವ ಸಂದರ್ಭದಲ್ಲಿ ಲೋಕೋಪಯೋಗಿ, ಅರಣ್ಯ, ಗ್ರಾಮೀàಣ ಅಭಿವೃದ್ಧಿ ಎಂಜಿನಿಯರಿಂಗ್ ವಿಭಾಗ, ಸೆಸ್ಕ್ ಇಲಾಖೆಗಳು ಹಾಗೂ ಪೋಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಕಾವೇರಿ ನದಿ ಪಾತ್ರದ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಗಂಜಿ ಕೇಂದ್ರ ತೆರೆಯುವುದು, ನಿರಾಶ್ರಿತರನ್ನು ಸ್ಥಳಾಂತರ ಮಾಡುವುದು ಮತ್ತಿತರ ಕಾರ್ಯಗಳನ್ನು ಚುರುಕಿನಿಂದ ನಿರ್ವ”ಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
Related Articles
ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬಂದಿ, ಸಾರ್ವ ಜನಿಕರು ಅತಿವೃಷ್ಟಿ ಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣಿ ಸಂಖ್ಯೆ 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು.
ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿರು ವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯ ವಾಣಿ 1912 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.ಮಳೆಗಾಲದ ಅವಧಿಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜೆ ಬೇಕಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಕೇಂದ್ರ ಕಚೇರಿಯ ಸಭೆ-ಸಮಾರಂಭಗಳು ಇದ್ದಲ್ಲಿ ಗಮನಕ್ಕೆ ತಂದು ತೆರಳಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
Advertisement