Advertisement

ಉಪ ಚುನಾವಣೆ: 25ಕ್ಕೆ ಕಾಂಗ್ರೆಸ್‌ ಸಭೆ

11:18 PM Apr 22, 2019 | Lakshmi GovindaRaju |

ಬೆಂಗಳೂರು: ಕುಂದಗೋಳ ಹಾಗೂ ಚಿಂಚೋಳಿ ವಿಧಾನ ಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚಿಸಲು ಏ.25 ರಂದು ಕಾಂಗ್ರೆಸ್‌ ಜಿಲ್ಲಾ ಮುಖಂಡರ ಸಭೆ ಕರೆಯಲಾಗಿದೆ.

Advertisement

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಪಾಲ್ಗೊಳ್ಳಲಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನ ಸಭಾ ಕ್ಷೇತ್ರದ ಸಚಿವರಾಗಿದ್ದ ಸಿ.ಎಸ್‌.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಅವರ ಪತ್ನಿ ಕುಸುಮಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಆದರೂ, ರಾಜ್ಯ ನಾಯಕರು ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಮುಖಂಡರ ಅಭಿಪ್ರಾಯ ಪಡೆಯಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಏ.25 ರಂದು ಜಿಲ್ಲಾ ಮುಖಂಡರ ಸಭೆ ಕರೆದಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೊಳಿ ಶಾಸಕರಾಗಿದ್ದ ಡಾ. ಉಮೇಶ್‌ ಜಾಧವ್‌ ರಾಜೀನಾಮೆ ನೀಡಿರುವುದರಿಂದ ತೆರವಾಗಿರುವ ಸ್ಥಾನಕ್ಕೆ ಮೇ 19 ರಂದು ಚುನಾವಣೆ ನಡೆಯುತ್ತಿರುವುದರಿಂದ ಆ ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಕುರಿತು ಜಿಲ್ಲಾ ಮುಖಂಡರ ಸಭೆಯನ್ನು ಅಂದೇ ಕರೆಯಲಾಗಿದೆ.

Advertisement

ಚಿಂಚೋಳಿಯಲ್ಲಿ ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಸುಭಾಸ್‌ ರಾಠೊಡ್‌, ಬಾಬುರಾವ್‌ ಚೌಹಾಣ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಸೂಚನೆ ಮೇರೆಗೆ ಚಿಂಚೋಳಿ ಅಭ್ಯರ್ಥಿ ಆಯ್ಕೆಯಾಗುವ ಸಾಧ್ಯತೆ ಇದೆ.

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಲು ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಸಭೆಯ ನಂತರ ಚಿಂಚೋಳಿ ಕ್ಷೇತ್ರಕ್ಕೂ ಉಸ್ತುವಾರಿ ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next