Advertisement

ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ 40 ದಿನಗಳ ಪೆರೋಲ್

02:15 PM Oct 14, 2022 | Team Udayavani |

ಚಂಡೀಗಢ: ಹರಿಯಾಣದ ಸುನಾರಿಯಾ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.

Advertisement

ಇದನ್ನೂ ಓದಿ : ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಖರ್ಗೆ ಪರ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು

ನವೆಂಬರ್ 3 ರಂದು ನಡೆಯಲಿರುವ ಆದಂಪುರ ಉಪಚುನಾವಣೆಗೆ ಮುನ್ನ ಈ ಕ್ರಮ ಕೈಗೊಳ್ಳಲಾಗಿದೆ. ಡೇರಾ ಮುಖ್ಯಸ್ಥ ಈ ಹಿಂದೆ ಜೂನ್‌ನಲ್ಲಿ ತಿಂಗಳ ಪೆರೋಲ್‌ನಲ್ಲಿ ಜೈಲಿನಿಂದ ಹೊರಬಂದಿದ್ದು, ಅದಕ್ಕೂ ಮೊದಲು, ಫೆಬ್ರವರಿಯಲ್ಲಿ ಅವರಿಗೆ ಮೂರು ವಾರಗಳ ಫರ್ಲೋ ನೀಡಲಾಗಿತ್ತು.

ಡೇರಾದ ಪ್ರಧಾನ ಕಚೇರಿ ಇರುವ ಸಿರ್ಸಾದಲ್ಲಿರುವ ತನ್ನ ಆಶ್ರಮದಲ್ಲಿ ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದು, ಆಗಸ್ಟ್ 2017 ರಲ್ಲಿ ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ದೋಷಿ ಎಂದು ಘೋಷಿಸಿತ್ತು.

2002 ರಲ್ಲಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕಾಗಿ ಅವರು ಕಳೆದ ವರ್ಷ ಇತರ ನಾಲ್ವರೊಂದಿಗೆ ಅಪರಾಧಿ ಎಂದು ಘೋಷಿಸಲಾಗಿತ್ತು. 16 ವರ್ಷಗಳ ಹಿಂದೆ ಪತ್ರಕರ್ತನ ಹತ್ಯೆಗೆ ಡೇರಾ ಮುಖ್ಯಸ್ಥ ಮತ್ತು ಇತರ ಮೂವರನ್ನು 2019 ರಲ್ಲಿ ಶಿಕ್ಷೆ ವಿಧಿಸಲಾಗಿತ್ತು.

Advertisement

ಆಗಸ್ಟ್‌ನಲ್ಲಿ ಕುಲದೀಪ್ ಬಿಷ್ಣೋಯ್ ಅವರು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next