Advertisement

ಹಳಿ ತಪ್ಪಿದ ಕಳಿಂಗ್ ಉತ್ಕಲ್ ಏಕ್ಸ್ ಪ್ರೆಸ್ ರೈಲು ಹಲವರು ಗಂಭೀರ

07:42 PM Aug 19, 2017 | Harsha Rao |

ಮುಜಾಫರ್ ನಗರ: ಕಳಿಂಗ್ – ಉತ್ಕಲ್ ಏಕ್ಸ್ ಪ್ರೆಸ್ ರೈಲಿನ 6 ಬೋಗಿಗಳು ಹಳಿತಪ್ಪಿದ ಪರಿಣಾಮ 30ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಶನಿವಾರ ಸಂಜೆ ಸಂಭವಿಸಿದೆ. 

Advertisement

ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ರೈಲ್ವೆ ಅಧಿಕಾರಿಗಳು, ರಾಷ್ಟ್ರೀಯ ವಿಪತ್ತು ರಕ್ಷಣಾ ದಳ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. 

ರೈಲು ಒಡಿಶಾದ ಪುರಿಯಿಂದ ಉತ್ತರಖಂಡ್ನ ಹರಿದ್ವಾರಕ್ಕೆ ತೆರಳುತಿತ್ತು ಘಟನೆಗೆ ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next