ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಲಿಂಗಸುಗೂರು ಪಟ್ಟಣದ ಬಿಜೆಪಿ ಕಾರ್ಯಕರ್ತ ರಾಜು ತಂಬಾಕೆಯನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.
ವಾಟ್ಸಾಪ್ ಸ್ಟೇಟಸ್ನಲ್ಲಿ ‘ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುವ ಫ್ಯಾಕ್ಟರಿಗಳು’ ಎಂದು ಬಿಂಬಿಸುವ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿದ್ದ. ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ತಡರಾತ್ರಿ ಠಾಣೆ ಎದುರು ಸೇರಿದ ನೂರಾರು ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುದಾಗಿ ಡಿಎಸ್ಪಿ ವೇಣುಗೋಪಾಲ್ ಭರವಸೆ ನೀಡಿದ್ದರಿಂದ ಪ್ರತಿಭಟನೆ ಕೈಬಿಡಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಆರೋಪಿ ರಾಜು ವಿರುದ್ಧ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಗಿದೆ. ಮಧ್ಯರಾತ್ರಿ 3 ಗಂಟೆಗೆ ಆರೋಪಿ ರಾಜುನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.