Advertisement

Khalistan: ಅಮೆರಿಕದಲ್ಲಿ ಖಲಿಸ್ತಾನಿಗಳಿಂದ ದೇಗುಲ ವಿರೂಪ- ಭಾರತ ಖಂಡನೆ

08:54 PM Dec 23, 2023 | Team Udayavani |

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದ ನೆವಾರ್ಕ್‌ ನಗರದಲ್ಲಿರುವ ಸ್ವಾಮಿ ನಾರಾಯಣ್‌ ವಾಸನ್‌ ಮಂದಿರದ ಗೋಡೆಗಳ ಮೇಲೆ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆಯಲಾಗಿದೆ. ಅಲ್ಲದೇ ಭಾರತದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಬರಹಗಳೂ ಅಲ್ಲಿ ಪತ್ತೆಯಾಗಿವೆ.

Advertisement

ಇದರ ಬೆನ್ನಲ್ಲೇ ಘಟನೆ ಕುರಿತು ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, “ದೇಗುಲ ವಿರೂಪಗೊಳಿಸಿದ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಇದು ಹಿಂದೂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಈ ಕುರಿತು ತನಿಖೆಗೆ ಅಮೆರಿಕ ಸರ್ಕಾರವನ್ನು ಭಾರತ ಆಗ್ರಹಿಸುತ್ತದೆ” ಎಂದು ಹೇಳಿದ್ದಾರೆ.

“ಭಾರತದ ವಿರುದ್ಧ ಉಗ್ರವಾದ ಮತ್ತು ಪ್ರತ್ಯೇಕತಾವಾದ ಶಕ್ತಿಗಳಿಗೆ ವಿದೇಶದಲ್ಲಿ ಅವಕಾಶ ದೊರೆಯಬಾರದು ಎಂದು ನಾವು ಪ್ರಬಲವಾಗಿ ಪ್ರತಿಪಾದಿಸುತ್ತೇವೆ. ದೇಗುಲವನ್ನು ವಿರೂಪಗೊಳಿಸಿದವರ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕು” ಎಂದು ಜೈಶಂಕರ್‌ ಆಗ್ರಹಿಸಿದ್ದಾರೆ.

“ಸ್ಯಾನ್‌ಫ್ರ್ಯಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿಯು ಅಮೆರಿಕ ಅಧಿಕಾರಿಗಳೊಂದಿಗೆ ಖಂಡನೆಯನ್ನು ದಾಖಲಿಸಿದೆ. ಅಲ್ಲದೇ ಸ್ಥಳೀಯ ಪೊಲೀಸರಿಂದ ತನಿಖೆಗೆ ಒತ್ತಾಯಿಸಿದ್ದು,  ಈಗಾಗಲೇ ಅಮೆರಿಕದ ಪೊಲೀಸರು ತನಿಖೆ ಆರಂಭಿಸಿದ್ದಾರೆ’ ಎಂದು ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next