Advertisement
ಅವರು ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ವರ್ಜೀನಿಯಾ ರಾಜ್ಯದ ರಿಚ್ಮಂ ಡ್ ನಗರದಲ್ಲಿ ಅಲ್ಲಿಯ ಕಾವೇರಿ ಮತ್ತು ರಿಚ್ಮಂಡ್ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 12ನೆಯ ಅಕ್ಕ ಸಮ್ಮೇಳನದ ಅಂಗವಾಗಿ ಜರಗಿದ ಚಿಂತನಗೋಷ್ಠಿಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ವೀರಶೈವ-ಲಿಂಗಾಯತ ಧರ್ಮ, ಸಂಸ್ಕೃತಿ, ಪರಂಪರೆ ಬಹು ಪ್ರಾಚೀನವಾದುದು. ಇಲ್ಲಿ ಅರ್ಚನೆ, ಆರಾಧನೆ ಮತ್ತು ಅನುಷ್ಠಾನದ ಕೇಂದ್ರ ಬಿಂದು “ಇಷ್ಟಲಿಂಗ’ವೇ ಆಗಿದೆ. ಸಿಂಧೂ ಬಯಲಿನ ನಾಗರಿಕತೆಯ ಕಾಲಘಟ್ಟದಿಂದಲೂ ವೀರಶೈವ-ಲಿಂಗಾಯತ ಧರ್ಮ, ಸಂಸ್ಕೃತಿ, ಪರಂಪರೆಗೆ ಅನುಗುಣವಾದ “ಇಷ್ಟಲಿಂಗಾರ್ಚನೆ’ಯ ಆಚರಣೆ ಇತ್ತೆಂಬುದು ಸಂಶೋಧನೆಯಿಂದ ಸಾಬೀತಾಗಿದೆ ಎಂದರು.
ಭಾರತದೆಲ್ಲೆಡೆ ಮತ್ತು ವಿದೇಶಗಳಲ್ಲಿ ಲಭ್ಯವಾದ ಅನೇಕ ಶಾಸನಗಳಲ್ಲಿ ವೀರಶೈವ ಧರ್ಮದ ಉಲ್ಲೇಖಗಳಿವೆ. ಶಾಸನಗಳು ಸಂಶೋಧನೆಗೆ ಅತ್ಯಂತ ನಿಖರ ಆಕರಗಳಾಗಿದ್ದು, ಶಾಸನೋಕ್ತ ವೀರಶೈವವನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಭಾರತದಲ್ಲಷ್ಟೇ ಅಲ್ಲದೇ ನೇಪಾಲ, ಭೂತಾನ್, ಶ್ರೀಲಂಕಾ, ಕಾಂಬೋಡಿಯಾ ಮುಂತಾದ ವಿದೇಶಗಳಲ್ಲಿಯೂ ಶಿವನ ಆರಾಧನೆ ಮತ್ತು ಲಿಂಗಾರ್ಚನೆ ಇರುವುದು ಸಂಶೋಧನೆಯಲ್ಲಿ ಗೋಚರವಾಗಿದೆ ಎಂದೂ ಅವರು ಹೇಳಿದರು. ಲಿಂಗಾಂಗ ಸಾಮರಸ್ಯ
ವೀರಶೈವ-ಲಿಂಗಾಯತ ಧರ್ಮವು ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಲ ತತ್ತ್ವವಾದದ್ದು. ಇಲ್ಲಿ ಮೋಕ್ಷವನ್ನು “ಲಿಂಗಾಂಗ ಸಾಮರಸ್ಯ’ ಎಂದಿದ್ದಾರೆ. ಸಾಕ್ಷಾತ್ಕಾರ ಸಂಪಾದನೆ ಎಂದರೆ ಅದು ಅಂತಿಮವಾಗಿ “ಭಗವದೆºಳಗು’ ಕಾಣುವ ಹಂಬಲ. ವಿಶ್ವದಲ್ಲಿಯ ಎಲ್ಲ ಧರ್ಮಗಳ ಮೂಲ ಪ್ರತಿಪಾದನೆಯೂ ಕೂಡ ಇದೇ ಆಗಿದೆ. ಭಗವಂತನನ್ನು ಕಾಣಲೇಬೇಕೆಂಬ ಹಿರಿದಾದ ಹಂಬಲಕ್ಕೆ ಕ್ರಮಿಸುವ ಮಾರ್ಗಗಳು ಹತ್ತು ಹಲವು. ವೀರಶೈವ-ಲಿಂಗಾಯತರು ನಿತ್ಯವೂ ಇಷ್ಟಲಿಂಗದ ಅನುಸಂಧಾನದ ಮೂಲಕ ಶಿವಬೆಳಗನ್ನು ಕಾಣುತ್ತಾರೆ ಎಂದೂ ಡಾ| ವೀರಭದ್ರಯ್ಯ ಹೇಳಿದರು.
Related Articles
Advertisement
ರಾಜಕಾರಣಿಗಳೂ ಸಹ ಧರ್ಮದ ವಿಚಾರಗಳಲ್ಲಿ ತಮಗೆ ಅನುಕೂಲವಾಗುವಂತೆ ವಿಭಜನೆಯ ಮಾತುಗಳನ್ನು ಎಂದೂ ಎಲ್ಲಿಯೂ ವ್ಯಕ್ತಪಡಿಸಬಾರದು. ಎಲ್ಲರೂ ಸೇರಿಕೊಂಡು ಸಾಮರಸ್ಯದ ನೆಲೆಯಲ್ಲಿ ಧರ್ಮದ ವಿಶಾಲ ವ್ಯಾಪ್ತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಅಮೆರಿಕದ ಕಾವೇರಿ ಮತ್ತು ರಿಚ್ಮಂಡ್ ಕನ್ನಡ ಸಂಘಟನೆಗಳ ಹಾಗೂ 12ನೆಯ ಅಕ್ಕ ಸಮ್ಮೇಳನ ಸಮಿತಿಯ ವಿವಿಧ ಪದಾಧಿಕಾರಿಗಳು ಇದ್ದರು.