ದೋಹಾ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರವು 17 ಸಿಬಿಎಸ್‌ಸಿ ಶಾಲೆಗಳಿಂದ ನಾಮನಿದೇರ್ಶನಗೊಂಡ, 46 ವರ್ಷಗಳ ದೀರ್ಘ ಸೇವೆಯನ್ನು ಸಲ್ಲಿಸದ ಶಿಕ್ಷಕರಿಗೆ
ಇಲ್ಲಿನ ಐಸಿಸಿ ಅಶೋಕ ಸಭಾಂಗಣದಲ್ಲಿ ಸಮ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಐಸಿಸಿ ಅಧ್ಯಕ್ಷರಾದ ಎ.ಪಿ.ಮಣಿಕಂಠನ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಶಿಕ್ಷಕರ ಕೊಡುಗೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
ಭಾರತೀಯ ರಾಯಭಾರ ಕಚೇರಿಯ ಡೆಪ್ಯುಟಿ ಚೀಫ್ ಸಂದೀಪ್ ಕುಮಾರ್ ಮಾತನಾಡಿ, ಶಿಕ್ಷಕರ ಕೊಡುಗೆ ಶ್ಲಾ ನೀಯ ಮತ್ತು ಅವರ ಪ್ರಯತ್ನವನ್ನು ಸಾಮಾನ್ಯವಾಗಿ ಸಮಾಜವು ಗುರುತಿಸುತ್ತದೆ ಎಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಐಸಿಸಿ ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್ ಸ್ವಾಗತಿಸಿ, ಐಸಿಸಿ ಶಾಲಾ ಚಟುವಟಿಕೆಗಳ ಮುಖ್ಯಸ್ಥ ಶಾಂತನು ದೇಶಪಾಂಡೆ ಈ ಕಾರ್ಯಕ್ರಮದ ಪರಿಕಲ್ಪನೆಯನ್ನು ವಿವರಿಸಿದರು. ಐಸಿಸಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ವಂದಿಸಿದರು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.