Advertisement

ಸಿಎಂಗೆ ಪತ್ರ ಬರೆದರೂ ಪರಿಸ್ಥಿತಿ ಸುಧಾರಿಸಿಲ್ಲ

06:50 PM May 08, 2021 | Team Udayavani |

ಹಾಸನ: ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆಹೆಚ್ಚುತ್ತಿದ್ದರೂ ಸರ್ಕಾರಚಿಕಿತ್ಸಾ ವ್ಯವಸ್ಥೆ ಸುಧಾರಣೆಗೆಸ್ಪಂದಿಸುತ್ತಿಲ್ಲ ಎಂದು ಮಾಜಿಪ್ರಧಾನಿ ಎಚ್‌.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

Advertisement

ಅಸಮಾಧಾನ: ಆಸ್ಪತ್ರೆಗಳಲ್ಲಿಕೊರೊನಾ ಸೋಂಕಿತರಿಗೆ ನಿಗದಿಯಾಗಿರುವ ಹಾಸಿಗೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾನುಮುಖ್ಯ ಮಂತ್ರಿ ಯಡಿಯೂರಪ್ಪನವರ ಜತೆ ದೂರವಾಣಿಯಲ್ಲಿ ಮಾತನಾಡಿ ಜಿಲ್ಲೆಯ ಜನತೆಗೆ ಯಾವುದೇ ಸಮಸ್ಯೆ ಉಂಟಾ ಗದಂತೆ ಎಚ್ಚರವಹಿಸಬೇಕೆಂದು ಮನವಿ ಮಾಡಿದ್ದೆ. ಮುಖ್ಯಮಂತ್ರಿಗಳು ನನ್ನ ಮನವಿಗೆ ಸಕಾರಾ ತ್ಮಕವಾಗಿ ಸ್ಪಂದಿಸಿದ್ದರು. ಜಿಲ್ಲೆಯಲ್ಲಿ ಯಾವುದೇಸಮಸ್ಯೆ ಯಾಗದಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂದಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಕಟಣೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ಪರಿಸ್ಥಿತಿ ನಿಭಾಯಿಸಲು ಕಷ್ಟವಾಗುತ್ತೆ: ಶುಕ್ರವಾರವೂ ಇಪ್ಪತ್ತು ಸೋಂಕಿತರು ಸಾವಿಗೀಡಾಗಿದ್ದು, ಎರಡೂವರೆ ಸಾವಿರಕ್ಕೂ ಹೆಚ್ಚು ಜನ ಸೋಂಕಿಗೆ ತುತ್ತಾಗಿದ್ದಾರೆ.ಮುಖ್ಯ ಮಂತ್ರಿಗಳು, ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಸಾವನ್ನಪ್ಪುತ್ತಿರುವ ಹಾಗೂ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ನಾನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜತೆಯಲ್ಲಿ ನಿರಂತರವಾಗಿ ಸಂಪರ್ಕದಲ್ಲಿ ಇದ್ದೇನೆ. ಇದೇ ರೀತಿ ರೋಗಿಗಳ ಸಂಖ್ಯೆ ಏರುತ್ತಿದ್ದರೆ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದು ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದಿದ್ದಾರೆ.

ನಿರ್ದೇಶನ ನೀಡಿದ್ದೇನೆ: ಎಚ್‌.ಡಿ.ರೇವಣ್ಣ ಅವರು,ಶಾಸಕರು ಹಾಗೂ ಮಾಜಿ ಸಚಿವರು ಮತ್ತು ಹಾಸನಜಿಲ್ಲೆಯ ಜನತಾದಳ ಶಾಸಕರು ಮುಖ್ಯಮಂತ್ರಿಗಳಲ್ಲಿ ಖುದ್ದಾಗಿ ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ.ಮುಖ್ಯಮಂತ್ರಿಗಳೂ ಎಲ್ಲಾ ರೀತಿಯ ಸೌಲಭ್ಯಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದುವರೆಗೂ ಯಾವುದೂ ಕಾರ್ಯಗತಕ್ಕೆಬಂದಿಲ್ಲ. ಇಂದು ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್‌.ಅಶ್ವತ್ಥನಾರಾಯಣಅವರು ಮುಖ್ಯ ಕಾರ್ಯದರ್ಶಿಯವರಿಗೆದೂರವಾಣಿ ಮುಖಾಂತರ ಮಾತನಾಡಿ ಜಿಲ್ಲೆಯಲ್ಲಿ20 ಸೋಂಕಿತ ರೋಗಿಗಳು ಸಾವನ್ನಪ್ಪಿದ್ದು,ಎರಡೂವರೆ ಸಾವಿರಕ್ಕೂ ಹೆಚ್ಚು ಸೋಂಕಿತರಾಗಿದ್ದು,ಜಿಲ್ಲೆಯಲ್ಲಿ ಸಮಸ್ಯೆ ಉಲ್ಬಣವಾಗುತ್ತಿದೆ. ಕೂಡಲೇಜಿಲ್ಲೆಗೆ ಕೊರೊನಾ ರೋಗಕ್ಕೆ ಸಂಬಂಧಿಸಿದ ಔಷಧಿ,ಇತರ ಮೂಲಭೂತ ಸೌಕರ್ಯ ನೀಡಿ ನೆರವಿಗೆಧಾವಿಸುವಂತೆ ಮನವಿ ಮಾಡಿದ್ದೇನೆ. ಮುಖ್ಯಕಾರ್ಯದರ್ಶಿಗಳು ಸಂಬಂಧಿಸಿದ ಅಧಿಕಾರಿಗಳಿಗೆಕೂಡಲೇ ಅಗತ್ಯ ಔಷಧ ಸರಬರಾಜು ಹಾಗೂಆಸ್ಪತ್ರೆಗೆ ಮೂಲ ಸೌಕರ್ಯ ಒದಗಿಸಲು ನಿರ್ದೇಶನನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next