Advertisement

ಒಂದು ಡೆಂಘೀ ಪ್ರಕರಣ ಪತ್ತೆ

04:27 PM Jul 10, 2019 | Suhan S |

ಅಂಕೋಲಾ: ತಾಲೂಕಿನಲ್ಲಿ ಒಂದು ಡೆಂಘೀ ಜ್ವರದ ಪ್ರಕರಣ ಪತ್ತೆಯಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಶಿಕ್ಷಣಾಧಿಕಾರಿ ಜ್ಯೋತಿ ನಾಯ್ಕ ಕೆಡಿಪಿ ಸಭೆಯಲ್ಲಿ ತಿಳಿಸಿದ್ದಾರೆ.

Advertisement

ತಾ.ಪಂ ಅಧ್ಯಕ್ಷೆ ಸುಜಾತಾ ಗಾಂವಕರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಅಧಿಕಾರಿ ಇಲಾಖೆ ವರದಿ ನೀಡಿದರು. ತಾಲೂಕಿನಲ್ಲಿ ಸ್ವಚ್ಛತೆ ಕುರಿತು ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ. ಪ್ರತಿ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಸೊಳ್ಳೆಗಳ ನಿಯಂತ್ರಣ ಮತ್ತು ಸ್ವಚ್ಛತೆ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ| ಮಹೇಂದ್ರ ನಾಯಕ ಮಾತನಾಡಿ ಪಟ್ಟಣದಲ್ಲಿ ಇಂತಹ ಎರಡು ಪ್ರಕರಣಗಳು ಕಂಡು ಬಂದಿದೆ. ಪಟ್ಟಣ ಪ್ರದೇಶದಲ್ಲಿ ನೀರು ಹರಿದು ಹೋಗದೆ ಅಲ್ಲಲ್ಲಿ ನಿಂತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ ಎಂದರು.

ಕೃಷಿ ಅಧಿಕಾರಿ ಶ್ರೀಧರ ನಾಯ್ಕ ಮಾತನಾಡಿ, ರೈತರು ಕಿಸಾನ್‌ ಸಮ್ಮಾನ ಯೋಜನೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಕಂದಾಯ ಅಧಿಕಾರಿ ರಾಮಾ ಗೌಡ ಮಾತನಾಡಿ ವಿಧ‌ವಾ ವೇತನ ಮತ್ತು ವೃದ್ಧಾಪ್ಯ ವೇತನ ಕುರಿತು ಆಧಾರ ಕಾರ್ಡ್‌ ಲಿಂಕ್‌ ಆಗದವರ ಹಣ ಬಿಡುಗಡೆ ಆಗುತ್ತಿಲ್ಲ ಎಂದರು.

Advertisement

ಶಿಕ್ಷಣ ಇಲಾಖೆ ಕ್ಷೇತ್ರಶಿಕ್ಷಣಾಧಿಕಾರಿ ಶ್ಯಾಮಲಾ ನಾಯಕ ಮಾತನಾಡಿ ಸರಕಾರಿ ಆಂಗ್ಲ ಮಾಧ್ಯಮ ಶಾಲೆಯನ್ನು ಕುಂಟಕಣಿಯಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆ ಭಾಗದಲ್ಲಿ ಒಂದನೇ ತರಗತಿಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವುದರಿಂದ ಪಟ್ಟಣದ ಅಂಬಾರಕೊಡ್ಲ ಶಾಲೆಯಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದರು.

ಉಪಾಧ್ಯಕ್ಷೆ ತುಳಸಿ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ, ಸದಸ್ಯರು, ತಾ.ಪಂ ಅಧಿಕಾರಿ ಸುನೀಲ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next