Advertisement
ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಜನರನ್ನು ಬಂಧಿಸಲಾಗಿದೆ. ಕೊಲೆ ಮಾಡಲು ಹಾಗೂ ಕೊಲೆ ಮಾಡಿದ ಬಳಿಕ ತಪ್ಪಿಸಿಕೊಳ್ಳಲು ಬಳಸಿದ್ದ ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿ ತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ 10 ಆರೋಪಿಗಳನ್ನು ನ್ಯಾಯಾಂಗ ಬಂಧನದಿಂದ 11 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನಷ್ಟು ವಿಚಾರಣೆ ನಡೆಸಲಿದ್ದಾರೆ. ಆಗ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ. ಆರೋಪಿಗಳಿಗೆ ಫಂಡಿಂಗ್ ಮಾಡಿದವರು, ಹರ್ಷನ ಕೊಲೆ ಮಾಡಲು ಕುಮ್ಮಕ್ಕು ನೀಡಿದವರನ್ನೂ ಬಂಧಿ ಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಆರೋಪಿಗಳು ಹರ್ಷ ಕೊಲೆಗಾಗಿ ಛತ್ತೀಸ್‌ಗಡ ನೋಂದಣಿಯ ಕಾರನ್ನು ಬಳಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಾವು ಸೆಕೆಂಡ್ ಹ್ಯಾಂಡ್ ಕಾರನ್ನು ಸೇಲ್ ಮಾಡುತ್ತಿದ್ದೆವು ಎಂದು ಆರೋಪಿಗಳು ಹೇಳುತ್ತಿದ್ದಾರೆ. ಅಕ್ಕಪಕ್ಕದ ರಾಜ್ಯದ ಕಾರುಗಳನ್ನು ತಂದು ಇಲ್ಲಿ ಮಾರಾಟ ಮಾಡುವುದು ಸರಿ. ಆದರೆ ಛತ್ತೀಸಗಡ ಕಾರನ್ನು ಇವರು ಎಲ್ಲಿಂದ ಖರೀದಿಸಿ ತಂದರು ಎನ್ನುವುದು ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿದೆ. ಇದೇ ಕಾರಣದಿಂದಲೇ ಕಾರಿನ ಮಾಲಕರ ಪತ್ತೆಗೆ ಪೊಲೀಸರು ಮುಂದಾಗಿದ್ದು, ತನಿಖೆ ಬಳಿಕ ಮತ್ತಷ್ಟು ವಿವರ ಸಿಗಲಿದೆ. ಇದನ್ನೂ ಓದಿ :ರಷ್ಯಾ-ಉಕ್ರೇನ್ ನಡುವೆ ಯುದ್ಧ: ಮಾಹಿತಿ ಕಲೆ ಹಾಕಲು ಕಂಟ್ರೋಲ್ ರೂಂ ಸ್ಥಾಪನೆ
Related Articles
ಯುವತಿಯರ ವಿವರ ಪತ್ತೆ?
ಹರ್ಷ ಸಾಯುವ ಕೆಲವೇ ನಿಮಿಷಗಳ ಹಿಂದೆ ವೀಡಿಯೋ ಕರೆ ಮಾಡಿದ್ದ ಯುವತಿಯರ ವಿವರಗಳು ಪೊಲೀಸರಿಗೆ ದೊರಕಿದೆ. ಈ ಪ್ರಕರಣದಲ್ಲಿ ಆ ಯುವತಿಯರ ಪಾತ್ರ ಇಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಕರೆ ಮಾಡಿದವರು ಸೋಷಿಯಲ್ ಮೀಡಿಯಾದಲ್ಲಿ ಹರ್ಷ ´ೋಟೋಗಳನ್ನು ನೋಡಿ ಸ್ನೇಹ ಬೆಳೆಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ದುರಾದೃಷ್ಟಕ್ಕೆ ಅದೇ ಗಳಿಗೆಯಲ್ಲಿ ಹರ್ಷ ಹತ್ಯೆ ಆಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಎಲ್ಲ ಬೆಳವಣಿಗೆ ಮಧ್ಯೆ ಹರ್ಷ ಮೊಬೈಲ್ ಮಾತ್ರ ಸಿಕ್ಕಿಲ್ಲ ಎನ್ನುತ್ತಿರುವುದು ಕುತೂಹಲ ಮೂಡಿಸಿದೆ. ಹೀಗಾಗಿ ಪೊಲೀಸರು ಆತನ ಮೊಬೈಲ್‌ಗೆ ಬಂದಿರುವ ಕರೆಗಳು ಹಾಗೂ ಚಾಟಿಂಗ್ ವಿವರ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
Advertisement
ಫೆ. 28ರ ವರೆಗೂ ನಿಷೇಧಾಜ್ಞೆಹರ್ಷ ಅಂತಿಮ ಯಾತ್ರೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿ ಗಲಾಟೆ ನಡೆಸಿದವರ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಜತೆಗೆ ಶಿವಮೊಗ್ಗದಲ್ಲಿ ನಡೆದ ಗಲಭೆ ವೇಳೆ ಪೊಲೀಸರಿಗೆ ಮಚ್ಚು ತೋರಿಸಿದವರನ್ನು ಪತ್ತೆ ಮಾಡಿರುವ ಪೊಲೀಸರು ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಶನಿವಾರದಿಂದ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದ್ದರೂ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಫೆ. 28ರ ಬೆಳಗ್ಗೆ 9 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.