ಉಳ್ಳಾಲ: ಕೊಣಾಜೆ ಹೂಹಾಕುವಕಲ್ಲು ಬೆಳ್ಳೇರಿಯ ಮನೆಯೊಂದರಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಹೂಹಾಕುವಕಲ್ಲುಬಳಿಯ ಬೆಳ್ಳೇರಿ ಎಂಬಲ್ಲಿ ಘಟನೆ ನಡೆದಿದ್ದು, ಸಾವನ್ನಪ್ಪಿರುವ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ
ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ವಿವಸ್ತ್ರ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸುಟ್ಟ ಗಾಯಗಳೂ ಕಂಡುಬಂದಿದೆ. ಮನೆಯ ಕರ್ಟನ್ ಕೂಡಾ ಅರ್ಧ ಸುಟ್ಟ ರೀತಿಯಲ್ಲಿದೆ. ಅಗ್ನಿ ಆಕಸ್ಮಿಕವಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಕೊಣಾಜೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.