ಹುಮನಾಬಾದ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳಗಿನ ಜಾವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸುಮಾರು 30 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ವ್ಯಕ್ತಿಯ ಬಲಗೈಯಲ್ಲಿ SF ಎಂದು ಟ್ಯಾಟೂ ಹಾಕಲಾಗಿದೆ. ವ್ಯಕ್ತಿಯ ಬಳಿ ಯಾವುದೇ ಗುರುತಿನ ದಾಖಲೆಗಳು ಪತ್ತೆಯಾಗಿಲ್ಲ. ಹೊಟ್ಟೆಯ ಕೆಳಭಾಗದಲ್ಲಿ ಹರಿತ ವಸ್ತುವಿನಿಂದ ಚುಚ್ಚಿರುವ ಗಾಯಗಳು ಕಂಡು ಬಂದಿವೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಹಣೆಗೆ ಗನ್ ಇಟ್ಟು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
Related Articles
ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಸಂಶಯ ವ್ಯಕ್ತಪಡಿಸಿ, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವ್ಯಕ್ತಿಯ ಗುರುತು ಪತ್ತೆಗಾಗಿ ಶೋಧ ನಡೆಸುತ್ತಿದ್ದು, ವ್ಯಕ್ತಿಯನ್ನು ಗುರುತಿಸುವವರು ಹುಮನಾಬಾದ್ ಪೊಲೀಸ್ ಠಾಣೆಗೆ (9480803452) ಸಂಪರ್ಕಿಸುವಂತೆ ತಿಳಿಸಿದ್ದಾರೆ.