Advertisement
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಅಕ್ರಮ ವಲಸಿಗರು, ವೀಸಾ ಅವಧಿ ಮುಗಿದರೂ, ದೇಶದಲ್ಲಿಯೇ ಉಳಿದುಕೊಳ್ಳುತ್ತಿದ್ದು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಇರುವ ದೃಷ್ಟಿಯಿಂದ, ಅವರನ್ನು ಗಡಿಪಾರು ಮಾಡುವ ಅಗತ್ಯವಿದೆ ಎಂದರು.
Related Articles
Advertisement
ಪ್ರಸ್ತುತ ಬೆಂಗಳೂರಿನ ಸಮೀಪ ವಿರುವ ನೆಲಮಂಗಲದ ಸಮೀಪ ದಿಗ್ಬಂಧನ ಕೇಂದ್ರವೊಂದು ಕಾರ್ಯಾಚರಣೆ ನಡೆಸುತ್ತಿದ್ದು, ಅಲ್ಲಿ ಸ್ಥಳಾವಕಾಶ ಕೊರತೆ ಇದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಪ್ರಸ್ತುತ ದಿಗ್ಬಂಧನ ಕೇಂದ್ರದ ಸಾಮರ್ಥ್ಯ ವಿಸ್ತರಣೆಗೆ ಸಮಾಜ ಕಲ್ಯಾಣ ಇಲಾಖೆ ಅನುದಾನ ಒದಗಿಸಬೇಕು ಹಾಗೂ ವಿಳಂಬವಿಲ್ಲದಂತೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದರು.
ಈ ಕುರಿತು ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಈ ಕುರಿತು ಗೃಹ ಇಲಾಖೆ ಸಲ್ಲಿಸುವ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಸಮಾಜ ಕಲ್ಯಾಣ ಅಧಿಕಾರಿಗಳಿಗೆ, ಸಚಿವ ಪೂಜಾರಿಯವರು, ಸಭೆಯಲ್ಲಿಯೇ ನಿರ್ದೇಶನ ನೀಡಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳೂ ಉಪಸ್ತಿತರಿದ್ದರು.