Advertisement
ದಕ್ಷಿಣ ಭಾರತದ ಮೊದಲ ಅಕ್ರಮ ವಲಸಿಗರ ಬಂಧನ ಕೇಂದ್ರವನ್ನು ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾಮದ ಸಮೀಪ ಸ್ಥಾಪನೆ ಮಾಡಲಾಗಿದ್ದು, ರಾಷ್ಟ್ರೀಯ ಪೌರತ್ವ ನೊಂದಣಿ (ಎನ್‌ಆರ್‌ಸಿ) ಹೊಂದಿಲ್ಲದ ವಲಸಿಗರನ್ನು ಗುರುತಿಸಿ ಬಂಧಿಸಲು ಸುಸಜ್ಜಿತ ಕೇಂದ್ರವನ್ನು ನಿರ್ಮಾಣ ಮಾಡುವ ಮೂಲಕ ಅಕ್ರಮ ವಲಸಿಗರಿಗೆ ಕಡಿವಾಡ ಹಾಕಲು ಸಿದ್ಧತೆ ನಡೆಸಲಾಗಿದೆ.
Related Articles
Advertisement
ಸೆರೆ ಕೇಂದ್ರವೇಕೆ: ರಾಜ್ಯದಲ್ಲಿರುವ ಅಕ್ರಮ ವಲಸಿಗರನ್ನು ಸೆರೆ ಹಿಡಿದು ಜೈಲಿಗೆ ಕಳುಹಿಸಲು ಸಾಧ್ಯವಾಗದ ಕಾರಣ ಬಂಧಿತ ಅಕ್ರಮ ವಲಸಿಗರು ಅವರ ದೇಶಗಳಿಗೆ ವಾಪಸ್ ಕಳಿಸುವತನಕ ಊಟ, ವಸತಿ ನೀಡಲು ಈ ಕೇಂದ್ರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಮಿಸಿದ್ದು, ಕೆಲವೇ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ.
ಮೊದಲ ಕೇಂದ್ರ: ದೇಶದ ಪ್ರತಿ ಅಡಿ ಶೋಧಿಸಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಕ್ರಮ ವಲಸಿಗರಿಗೆ ಶಾಕ್ ನೀಡಿದ್ದರು. ಆದರೆ ದಕ್ಷಿಣ ಭಾರತದಲ್ಲಿ ಎನ್‌ಆರ್‌ಸಿ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರಗಳು ಒಲವು ತೋರಿರಲಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ದಕ್ಷಿಣ ಭಾರತದ ಮೊದಲ ಕೇಂದ್ರ ಸದ್ದಿಲ್ಲದೆ ಸಿದ್ದವಾಗಿದ್ದು ಕೇಂದ್ರ ಸರ್ಕಾರದ ನಡೆ ಅಚ್ಚರಿ ಮೂಡಿಸಿದೆ.
ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯವನ್ನು ಅಕ್ರಮ ವಲಸಿಗರ ಬಂಧನ ಕೇಂದ್ರವಾಗಿ ನಿರ್ಮಾಣ ಮಾಡಲಾಗಿದೆ ಎಂಬ ಮಾಹಿತಿಯಿದೆ. ಈ ಬಗ್ಗೆ ಗ್ರಾಮ ಸಭೆಯಲ್ಲಿ ಗಲಾಟೆ ಗದ್ದಲವಾಗಿತ್ತು. ಬಂಧನ ಕೇಂದ್ರದ ಕಾರ್ಯ ಚಟುವಟಿಕೆಯ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿಯಿಲ್ಲ.-ರಾಘವೇಂದ್ರ ಪಿ.ಎಸ್, ಸೊಂಡೆಕೊಪ್ಪ ಗ್ರಾ.ಪಂ ಪಿಡಿಓ