ಯಾದಗಿರಿ: ಜಿಲ್ಲಾ ಕೇಂದ್ರದಿಂದ 11 ಕಿಮೀ ದೂರದಲ್ಲಿರುವ ಯಾದಗಿರಿ ಮತಕ್ಷೇತ್ರದ ಶಹಾಪುರ ತಾಲೂಕು ಉಳ್ಳೆಸೂಗುರು ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಗ್ರಾಮಸ್ಥರು ಪ್ರತಿನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಉಳ್ಳೆಸೂಗುರು 2,500 ಜನಸಂಖ್ಯೆ ಹೊಂದಿದೆ. ಗ್ರಾಪಂ ಕಚೇರಿ ಇದೆ. 12 ಜನ ಗ್ರಾಪಂ ಸದಸ್ಯರು ಹೊಂದಿದ್ದರೂ ಉಳ್ಳೆಸೂಗುರಿನಿಂದ ಕುರಕುಂದ ಮತ್ತು ಯಾದಗಿರಿಗೆ ಸಂಪರ್ಕ ಕಲ್ಪಿಸುವ 45 ಕಿಮೀ ವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಗ್ರಾಮಸ್ಥರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ಈಗ ಮಳೆಗಾಲದಲ್ಲಿ ರಸ್ತೆ ಕೆಸರುಮಯವಾಗುತ್ತದೆ. ನೀರು ನಿಲ್ಲುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುವಂತಾಗಿದೆ. ಆದ್ದರಿಂದ ಗ್ರಾಪಂ ಸದಸ್ಯರು ಹಾಗೂ ಅ ಧಿಕಾರಿಗಳು ಕೂಡಲೇ ರಸ್ತೆ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರಾದ ದೇವಪ್ಪ, ಶರಣಪ್ಪ, ಚಂದಪ್ಪ ಅವರು ಆಗ್ರಹಿಸಿದ್ದಾರೆ. ಗ್ರಾಮಸ್ಥರು ಎತ್ತಿನ ಗಾಡಿ, ಬೈಕ್‌ನಲ್ಲಿ ಹೋಗಲು ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ ಜನಪ್ರತಿನಿಧಿ ಗಳಿಗೆ ಮತ್ತು ಅಧಿ ಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ. ಇನ್ನೂ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿ ಹಾಗೂ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ಸರಕಾರದಿಂದ ಗ್ರಾಮ ಸಡಕ್ ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಆದರೂ ರಸ್ತೆಗಳು ದುರಸ್ತಿ ಭಾಗ್ಯ ಕಾಣದೆ ಗ್ರಾಮಸ್ಥರು ಪ್ರತಿನಿತ್ಯ ನರಳುವಂತಾಗಿದೆ. ಸಂಬಂಧಿಸಿದ ಅಧಿ ಕಾರಿಗಳು ಹಾಗೂ ಜನಪ್ರತಿನಿ ಧಿಗಳು ಎಚ್ಚೆತ್ತುಕೊಂಡು ಗ್ರಾಮದ ರಸ್ತೆ ನಿರ್ಮಾಣಕ್ಕೆ ಮುಂದಾಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಶೀಘ್ರ ಕ್ರಮ: ಗ್ರಾಮದ ರಸ್ತೆ ಹದಗೆಟ್ಟಿರುವುದು ಗಮನಕ್ಕಿದೆ. ರಸ್ತೆ ನಿರ್ಮಾಣಕ್ಕಾಗಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಲಾಗುವು¨.
ಮಲ್ಲಿಕಾರ್ಜುನ, ಪಿಡಿಒ.
ಮನವಿಗೂ ಸ್ಪಂದಿಸಿಲ್ಲ: ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆ ನಿರ್ಮಾಣಕ್ಕೆ ಗ್ರಾಪಂ ಅಧ್ಯಕ್ಷರು ಮತ್ತು ಪಿಡಿಒಗೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ.
ಭೀಮರಾಯ, ಗ್ರಾಮಸ