Advertisement

ದೇವದಾಸಿಯರ ಮಾಸಾಶನ ಹೆಚಳಕ್ಕೆ ಆಗ್ರಹ

06:39 PM Jan 20, 2021 | Team Udayavani |

ಹರಪನಹಳ್ಳಿ: ದೇವದಾಸಿ ಮಹಿಳೆಯರಿಗೆ ನೀಡುತ್ತಿರುವ ಮಾಶಾಸನವನ್ನು ಮುಂಬರುವ ಬಜೆಟ್‌ನಲ್ಲಿ ತಿಂಗಳಿಗೆ 5000ರೂಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವಾದಾಸಿ ಮಹಿಳೆಯರ ವಿಮೋಚನಾ ಸಂಘದ ನೇತೃತ್ವದಲ್ಲಿ ದೇವದಾಸಿ ಮಹಿಳೆಯರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ.ರೇಣುಕಮ್ಮ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ನಿರಂತರ ಪ್ರತಿಭಟನೆ ನಡೆಸಿ ನಮ್ಮ ಹಕ್ಕೊತ್ತಾಯಗಳನ್ನು ರಾಜ್ಯ ಬಜೆಟ್‌ ಅಲ್ಲಿ ಸೇರ್ಪಡೆ ಮಾಡುವಂತೆ ಒತ್ತಾಯ ಮಾಡುತ್ತಾ ಬರುತ್ತಿದ್ದೇವೆ. ಆದರೆ ಮಾಸಿಕ ಸಹಾಯಧನ ಪಿಂಚಣಿ ಹಣವನ್ನು ಕನಿಷ್ಠ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕೆಂಬ ಹಕ್ಕೋತ್ತಾಯಕ್ಕೆ ಕೇವಲ ಸುಳ್ಳು ಭರವಸೆ ನೀಡುತ್ತಾ ಬಂದಿರುವುದನ್ನು ಬಿಟ್ಟರೆ ಪರಿಹಾರ ದೊರಕಿಸಿಲ್ಲ. ಕಳೆದ ಮೂರು ಪಕ್ಷಗಳ ನೇತೃತ್ವದ ಸರ್ಕಾರಗಳು ಬೇಡಿಕೆ ಈಡೇರಿಸದೇ ವಂಚಿಸಿವೆ ಎಂದು ದೂರಿದರು. ಕರ್ನಾಟಕ ಪ್ರಾಂತ್ಯ ರೈತ ಸಂಘಟನೆ ತಾಲೂಕು ಅಧ್ಯಕ್ಷ ಹುಲಿಕಟ್ಟಿ ರಾಜಪ್ಪ ಮಾತನಾಡಿದರು.

ಇದನ್ನೂ ಓದಿ:ಶಿಕ್ಷಣದಿಂದ ಸರ್ವಾಂಗೀಣ ವ್ಯಕ್ತಿತ್ವ

ಸಂಘದ ತಾಲೂಕು ಅಧ್ಯಕ್ಷರಾದ ಎಸ್‌. ರೇಣುಕಾ, ಉಪಾಧ್ಯಕ್ಷರಾದ ಸಣ್ಣ ಕೆಂಚಮ್ಮ, ಹೂವಕ್ಕ, ಎ.ಮುತ್ತಮ್ಮ, ಈರಮ್ಮ, ಕೆಂಚಮ್ಮ, ಎಚ್‌.ಕಾಳಮ್ಮ, ಮರಿಯಮ್ಮ, ಮಾಳಗಿ ಹಾಲಮ್ಮ ಇತರರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next